ಉತ್ತರ ಪ್ರದೇಶದಲ್ಲಿ ಗುಡುಗು ಸಿಡಿಲಿನ ಆರ್ಭಟಕ್ಕೆ ನೂರಕ್ಕೂ ಹೆಚ್ಚು ಜನ ಬಲಿ

ಉತ್ತರ ಪ್ರದೇಶದಲ್ಲಿ ಗುಡುಗು ಸಿಡಿಲಿನ ಆರ್ಭಟಕ್ಕೆ ನೂರಕ್ಕೂ ಹೆಚ್ಚು ಜನ ಬಲಿ

Jun 22, 2016 03:44:51 PM (IST)

ಪಾಟ್ನಾ: ಉತ್ತರ ಪ್ರದೇಶ ಹಾಗೂ ಬಿಹಾರದಲ್ಲಿ ಸಿಡಿಲಿನ ಆರ್ಭಟಕ್ಕೆ 100ಕ್ಕೂ ಅಧಿಕ ಮಂದಿ ಬಲಿಯಾಗಿರುವುದು ವರದಿಯಾಗಿದೆ.

48 killed in Bihar lightning strikes-1ಬಿಹಾರದ ಹಲವು ಭಾಗಗಳಲ್ಲಿ ಭಾರೀ ಸಿಡಿಲಿನೊಂದಿಗೆ ಮಳೆಯಾಗುತ್ತಿದ್ದು ಇಬ್ಬರು ಮಕ್ಕಳು ಸೇರಿದಂತೆ 56 ಮಂದಿ ಬಲಿಯಾಗಿರುವ ಬಗ್ಗೆ ವರದಿಯಾಗಿದೆ. ಉತ್ತರ ಪ್ರದೇಶದಲ್ಲೂ ಭಾರೀ ಸಿಡಿಲಿನಿಂದ ಕೂಡಿದ ಮಳೆಯಾಗುತ್ತಿದ್ದು 46 ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.

ಬಿಸಿಲಿನಿಂದ ಕಂಗೆಟ್ಟಿದ್ದ ಉತ್ತರ ಪ್ರದೇಶಕ್ಕೆ ಭಾರೀ ಮಳೆ ಹಾಗೂ ಗುಡುಗು ಸಿಡಿಲಿಗೆ ನೂರಾರು ಜನರು ಮನೆಗಳನ್ನು ಕಳೆದುಕೊಂಡಿದ್ದಾರೆ.