
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ತೀವ್ರತೆ ಪಡೆದಿರುವಂತಹ `ಗಜ’ ಚಂಡಮಾರುತವು ಮುಂದಿನ 24 ಗಂಟೆಗಳಲ್ಲಿ ಇದು ಕೆಲವು ರಾಜ್ಯಗಳ ಕರಾವಳಿಗೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆಯು ಹೇಳಿದೆ.
ತಮಿಳುನಾಡು, ಪುದುಚೇರಿ ಮತ್ತು ಆಂಧ್ರ ಪ್ರದೇಶದ ದಕ್ಷಿಣ ಕರಾವಳಿ ಭಾಗದಲ್ಲಿ ಚಂಡಮಾರುತ ಮುನ್ನೆಚ್ಚರಿಕೆ ಜಾರಿಗೊಳಿಸಲಾಗಿದೆ.
ಚಂಡಮಾರುತವು ಮುಂದಿನ 36 ಗಂಟೆಗಳಲ್ಲಿ ಪಶ್ಚಿಮವಾಯುವ್ಯದತ್ತ ಸಾಗಲಿದೆ. ಇದರ ಬಳಿಕ ಪಶ್ಚಿಮ ನೈರುತ್ಯ ಭಾಗಕ್ಕೆ ಸಾಗಲಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.
ಇದರಿಂದ ತಮಿಳುನಾಡಿನ ಉತ್ತರ ಭಾಗ ಮತ್ತು ಆಂಧ್ರ ಪ್ರದೇಶದ ದಕ್ಷಿಣ ಭಾಗದ ಕರಾವಳಿಯಲ್ಲಿ ಮುಂದಿನ 48 ಗಂಟೆಗಳ ಕಾಲ ಇದರ ತೀವ್ರತೆಯು ಇರಲಿದೆ ಎಂದು ಹವಾಮಾನ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ.