ಯೋಗೇಶ್ ಗೌಡ ಹತ್ಯೆ ಪ್ರಕರಣ: ಹೈಕೋರ್ಟ್ ತೀರ್ಪಿಗೆ ಸುಪ್ರೀಂ ತಡೆ

ಯೋಗೇಶ್ ಗೌಡ ಹತ್ಯೆ ಪ್ರಕರಣ: ಹೈಕೋರ್ಟ್ ತೀರ್ಪಿಗೆ ಸುಪ್ರೀಂ ತಡೆ

Feb 20, 2020 08:14:14 PM (IST)
ಯೋಗೇಶ್ ಗೌಡ ಹತ್ಯೆ ಪ್ರಕರಣ: ಹೈಕೋರ್ಟ್ ತೀರ್ಪಿಗೆ ಸುಪ್ರೀಂ ತಡೆ

ನವದೆಹಲಿ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣವನ್ನು ಸಿಬಿಐಗೆ ನೀಡಿರುವುದನ್ನು ಅಮಾನತ್ತಿನಲ್ಲಿಟ್ಟಿದ್ದ ರಾಜ್ಯ ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್ ತಡೆ ಹೇರಿದೆ.

ಯೋಗೇಶ್ ಗೌಡ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಿರುವುದನ್ನು ಹೈಕೋರ್ಟ್ ನ ಧಾರವಾಡ ಪೀಠವು 2016ರ ನವೆಂಬರ್ 21ರಂದು ತಡೆ ಹಿಡಿದಿತ್ತು.

ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಮತ್ತು ಅನಿರುದ್ಧ್ ಬೋಸ್ ಅವರನ್ನು ಒಳಗೊಂಡ ಪೀಠವು ಸಿಬಿಐ ಈಗಾಗಲೇ ಶೇ.60ರಷ್ಟು ತನಿಖೆ ಕೈಗೊಂಡಿದೆ. ಇದು ಪೂರ್ಣಗೊಳ್ಳಲಿದೆ ಎಂದು ಹೇಳಿದೆ.

2016ರ ಜನವರಿ 15ರಂದು ಯೋಗೇಶ್ ಗೌಡ ಕೊಲೆ ನಡೆದಿತ್ತು.