ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: 15 ಮಂದಿ ಸಾವು

ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: 15 ಮಂದಿ ಸಾವು

Dec 13, 2015 05:17:42 PM (IST)

ಇಸ್ಲಾಮಾಬಾದ್: ಪಾಕಿಸ್ತಾನದ ಪರಾಚಿನಾರ್ ನಗರದ ಮಾರ್ಕೆಟ್ ವೊಂದರಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಕನಿಷ್ಠ 15 ಮಂದಿ ಮೃತಪಟ್ಟಿದ್ದು, 30 ರಿಂದ 50 ಜನರಿಗೆ ಗಾಯಗಳಾಗಿವೆ.

10 people killed in Pakistan blast-1ಅಫ್ಘಾನಿಸ್ತಾನಕ್ಕೆ ಹೊಂದಿಕೊಂಡಿರುವ ಕುರುಮ್ ಪ್ರಾಂತ್ಯದ ಪರಾಚಿನಾರ್ ನಗರದ ಬಟ್ಟೆ ಮಾರುಕಟ್ಟೆಯಲ್ಲಿ ಪ್ರಬಲ ಸ್ಫೋಟ ಸಂಭವಿಸಿದೆ. ಚಳಿಗಾಲ ಪ್ರಾರಂಭವಾಗಿರುವ ಕಾರಣ ಬಟ್ಟೆ ಮಾರುಕಟ್ಟೆಯಲ್ಲಿ ಹೆಚ್ಚಿನ ಜನಸಂದಣಿಯಿದ್ದ ಪರಿಣಾಮ ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ. ಇದೊಂದು ಆತ್ಮಾಹುತಿ ಬಾಂಬ್ ದಾಳಿಯೇ ಅಥವಾ ಮಾರುಕಟ್ಟೆಯಲ್ಲಿ ಬಾಂಬ್ ಇಡಲಾಗಿತ್ತೇ ಎಂಬ ಮಾಹಿತಿ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.