ಮಕ್ಕಳ ಅತ್ಯಾಚಾರಿಗೆ ಗಲ್ಲು: ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ

ಮಕ್ಕಳ ಅತ್ಯಾಚಾರಿಗೆ ಗಲ್ಲು: ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ

HSA   ¦    Apr 22, 2018 12:55:13 PM (IST)
ಮಕ್ಕಳ ಅತ್ಯಾಚಾರಿಗೆ ಗಲ್ಲು: ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ

ನವದೆಹಲಿ: ಅಪ್ರಾಪ್ತ ಬಾಲಕಿಯರ ಅತ್ಯಾಚಾರಿಗಳಿಗೆ ಇನ್ನು ಮುಂದೆ ಗಲ್ಲು ಶಿಕ್ಷೆ ವಿಧಿಸುವ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಕಿತ ಹಾಕಿದ್ದಾರೆ.

ಅತ್ಯಾಚಾರಿಗೆ ಮರಣದಂಡನೆ ವಿಧಿಸಲು ಫೋಕ್ಸೊ ಕಾಯ್ದೆ ತಿದ್ದುಪಡಿಗೆ ಶನಿವಾರ ಕೇಂದ್ರ ಸಚಿವ ಸಂಪುಟ ಅನುಮೋದಿಸಿತ್ತು. ಫೋಕ್ಸೋ ಕಾಯ್ದೆಯ ತಿದ್ದುಪಡಿ ಮಾಡಿಕೊಂಡು ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ವಿಧಿಸುವ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಒಪ್ಪಿಗೆ ನೀಡಿದ್ದಾರೆ.

ಇದರಿಂದ ಈ ಕಾಯ್ದೆಯು ಇಂದಿನಿಂದ ಕಾನೂನು ಆಗಿ ಪರಿವರ್ತನೆಯಾಗಲಿದೆ. ಈ ಕಾಯ್ದೆಯಲ್ಲಿ ಕೆಲವೊಂದು ಬದಲಾವಣೆಗಳು ಕೂಡ ಆಗಿದೆ.

ಕತುವಾ ಮತ್ತು ಉತ್ತರ ಪ್ರದೇಶದ ಉನ್ನಾವ್ ನಲ್ಲಿ ನಡೆದ ಅತ್ಯಾಚಾರ ಪ್ರಕರಣದ ಬಳಿಕ ದೇಶದಾದ್ಯಂತ ಉಗ್ರ ರೀತಿಯ ಪ್ರತಿಭಟನೆಗಳು ನಡೆಯುತ್ತಿವೆ. ಇದರಿಂದ ಎಚ್ಚೆತ್ತುಕೊಂಡು ಕೇಂದ್ರ ಸರ್ಕಾರ ತಿದ್ದುಪಡಿ ಮಾಡಲು ನಿರ್ಧರಿಸಿತ್ತು.