ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಫೋಟ ದುರಂತ; ಪ್ರಧಾನಿ ಸಂತಾಪ

ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಫೋಟ ದುರಂತ; ಪ್ರಧಾನಿ ಸಂತಾಪ

MS   ¦    Feb 23, 2021 02:29:14 PM (IST)
ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಫೋಟ ದುರಂತ; ಪ್ರಧಾನಿ ಸಂತಾಪ

ನವದೆಹಲಿ : ಶಿವಮೊಗ್ಗದಲ್ಲಿ ನಡೆದ ಬೃಹತ್ ಸ್ಫೋಟದ ನಂತರ ಇದೀಗ ಮತ್ತೊಂದು ಸ್ಫೋಟವಾಗಿದ್ದು, ರಾಜ್ಯದ ಚಿಕ್ಕಬಳ್ಳಾಪುರದ ಹಿರೇನಾಗವೇಲಿಯಲ್ಲಿ ಸಂಭವಿಸಿದ ಜಿಲೆಟಿನ್ ಸ್ಫೋಟ ದುರಂತ ನಡೆದಿದೆ.

ಈ ಕುರಿತು ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದು, ದುರಂತದಲ್ಲಿ ಪ್ರಾಣ ಹಾನಿ ಸಂಭವಿಸಿರುವುದಕ್ಕೆ ತೀವ್ರ ನೋವಾಗಿದೆ . ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇನೆ ಎಂದು ತಿಳಿಸಿದ್ದಾರೆ.

ಗೃಹ ಸಚಿವ ಬಸವರಾಜ್ ಬೊಮ್ಮಾಯಿ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಜಿಲೆಟಿನ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಆರಕ್ಕೆ ಏರಿದೆ . ಘಟನಾ ಸ್ಥಳದಲ್ಲಿಯೇ ಮರಣೋತ್ತರ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.

ಈ ಸ್ಫೋಟಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಪೊಲೀಸರು, ದುರಂತ ಸಂಬಂಧ ಇಬ್ಬರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ .