ಮಹಾರಾಷ್ಟ್ರ ಮೈತ್ರಿ ಸರ್ಕಾರದಲ್ಲಿ ಬಿರುಕು

ಮಹಾರಾಷ್ಟ್ರ ಮೈತ್ರಿ ಸರ್ಕಾರದಲ್ಲಿ ಬಿರುಕು

HSA   ¦    Feb 14, 2020 02:39:38 PM (IST)
ಮಹಾರಾಷ್ಟ್ರ ಮೈತ್ರಿ ಸರ್ಕಾರದಲ್ಲಿ ಬಿರುಕು

ಮುಂಬಯಿ: ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದ ತನಿಖೆಯನ್ನು ಮಹಾರಾಷ್ಟ್ರ ಸರ್ಕಾರವು ರಾಷ್ಟ್ರೀಯ ತನಿಖಾ ದಳ(ಎನ್ ಐಎ)ಗೆ ವಹಿಸಿರುವುದರಿಂದ ಈಗ ಮಹಾ ವಿಕಾಸ ಅಗಡಿ ಸರ್ಕಾರದಲ್ಲಿ ಭಿನ್ನಾಭಿಪ್ರಾಯ ತೋರಿಬಂದಿದೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಭೀಮಾ ಕೋರೆಗಾಂವ್ ಹಿಂಸಾಚಾರವನ್ನು ಎನ್ ಐಎಗೆ ವಹಿಸಿರುವುದನ್ನು ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ(ಎನ್ ಸಿಪಿ) ಮುಖ್ಯಸ್ಥ ಶರದ್ ಪವಾರ್ ಟೀಕಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಪವಾರ್ ಅವರು, ಭೀಮಾ ಕೋರೆಗಾಂವ್ ಪ್ರಕರಣದ ತನಿಖೆಯ ವಿಚಾರವನ್ನು ಎನ್ ಐಎ ಗೆ ವಹಿಸಿರುವುದು ಸರಿಯಾದ ನಿರ್ಧಾರವಲ್ಲ ಎಂದರು.

ಕಳೆದ ತಿಂಗಳು ಭೀಮಾ ಕೋರೆಗಾಂವ್ ಪ್ರಕರಣದ ತನಿಖೆಯನ್ನು ಕೇಂದ್ರ ಸರ್ಕಾರವು ಎನ್ ಐಎಗೆ ವರ್ಗಾಯಿಸಿತ್ತು. ಇದರ ವಿರುದ್ಧ ಮಹಾರಾಷ್ಟ್ರ ಸರ್ಕಾರವು ವಿರೋಧ ವ್ಯಕ್ತಪಡಿಸಿತ್ತು. ಆದರೆ ಫೆಬ್ರವರಿ 13ರಂದು ಮಹಾರಾಷ್ಟ್ರ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂಜಯ್ ಕುಮಾರ್ ಅವರು, ಎನ್ ಐಎ ತನಿಖೆಗೆ ಯಾವುದೇ ಅಡ್ಡಿಯಿಲ್ಲ ಎಂದು ಹೇಳಿರುವರು.