ತಮಿಳುನಾಡು ವಿಧಾನಸಭೆ ಚುನಾವಣೆಗೂ ಎಐಎಡಿಎಂಕೆ-ಬಿಜೆಪಿ ಮೈತ್ರಿ ಮುಂದುವರಿಕೆ

ತಮಿಳುನಾಡು ವಿಧಾನಸಭೆ ಚುನಾವಣೆಗೂ ಎಐಎಡಿಎಂಕೆ-ಬಿಜೆಪಿ ಮೈತ್ರಿ ಮುಂದುವರಿಕೆ

HSA   ¦    Nov 21, 2020 07:01:26 PM (IST)
ತಮಿಳುನಾಡು ವಿಧಾನಸಭೆ ಚುನಾವಣೆಗೂ ಎಐಎಡಿಎಂಕೆ-ಬಿಜೆಪಿ ಮೈತ್ರಿ ಮುಂದುವರಿಕೆ

ಚೆನ್ನೈ: ತಮಿಳುನಾಡಿನಲ್ಲಿ ನಡೆಯಲಿರುವ 2021ನೇ ವಿಧಾನಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಯು ಮುಂದುವರಿಯಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ. ಪನೀರ್ ಸೆಲ್ವಂ ಅವರು ಹೇಳಿದರು.

ಚೆನ್ನೈಯಲ್ಲಿ ಐದನೇ ಜಲಾಶಯವನ್ನು ಗೃಹ ಸಚಿವ ಅಮಿತ್ ಶಾ ಅವರು ಉದ್ಘಾಟನೆ ಮಾಡಿದರು. ಇದೇ ವೇಳೆ ಅವರು ಚೆನ್ನೈ ಮೆಟ್ರೋ ರೈಲಿನ ಸಹಿತ ಹಲವಾರು ಕಾಮಗಾರಿಗೆ ಶಿಲಾನ್ಯಾಸ ಮಾಡಿದರು.

ಈ ವೇಳೆ ಎಐಎಟಿಎಂಕೆ ಸಹ ಸಂಚಾಲಕ ಹಾಗೂ ಉಪ ಸಂಚಾಲಕರು ಬಿಜೆಪಿ ಜತೆಗೆ ಮೈತ್ರಿ ಮುಂದುವರಿಸುವ ಬಗ್ಗೆ ಘೋಷಣೆ ಮಾಡಿದರು.

ಮೈತ್ರಿಯಿಂದ ವಿಧಾನಸಭೆಯಲ್ಲಿ ಎಐಎಡಿಎಂಕೆ-ಬಿಜೆಪಿಯು ಬಹುಮತ ಪಡೆಯುವುದಾಗಿ ಅವರು ವಿಶ್ವಾಸ ವ್ಯಕ್ತಪಡಿಸಿದರು.