ಮುಂಬೈನಲ್ಲಿ ವಸತಿ ಕಟ್ಟಡ ಕುಸಿತ – 11 ಸಾವು, 8 ಮಂದಿಗೆ ಗಾಯ

ಮುಂಬೈನಲ್ಲಿ ವಸತಿ ಕಟ್ಟಡ ಕುಸಿತ – 11 ಸಾವು, 8 ಮಂದಿಗೆ ಗಾಯ

Jun 10, 2021 08:52:57 AM (IST)
ಮುಂಬೈನಲ್ಲಿ ವಸತಿ ಕಟ್ಟಡ ಕುಸಿತ – 11 ಸಾವು, 8 ಮಂದಿಗೆ ಗಾಯ

ಮುಂಬೈ: ಎರಡು ಅಂತಸ್ತಿನ ವಸತಿ ಕಟ್ಟಡ ಇನ್ನೊಂದು ಕಟ್ಟಡದ ಮೇಲೆ ಕುಸಿತಗೊಂಡ ಪರಿಣಾಮ 11 ಮಂದಿ ಸಾವನ್ನಪ್ಪಿ, 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮುಂಬೈಯ ಮಲಾಡ್ ವೆಸ್ಟ್ ಪ್ರದೇಶದ ನ್ಯೂ ಕಲೆಕ್ಟರ್ ಕಾಂಪೌಂಡ್ ನಲ್ಲಿ ನಡೆದಿದೆ.
ಘಟನೆಯಲ್ಲಿ ಈಗಾಗಲೇ 11 ಮಂದಿ ಮೃತಪಟ್ಟಿದ್ದು, 8 ಮಂದಿ ಗಾಯಗೊಂಡವರನ್ನು ರಕ್ಷಣೆ ಮಾಡಲಾಗಿದೆ. ಅವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಕಳೆದ ರಾತ್ರಿ 11 ಗಂಟೆ ಸುಮಾರಿಗೆ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಈ ಹಿನ್ನೆಲೆಯಲ್ಲಿ ಪಕ್ಕದ 3 ಮನೆಗಳ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ. ಇನ್ನೂ ಹಲವರು ಕಟ್ಟಡದ ಅವಶೇಷದಡಿಯಲ್ಲಿ ಸಿಲುಕಿ ಹಾಕಿಕೊಂಡಿದ್ದು ಅವರ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಬೃಹತ್ ಮುಂಬೈ ಮಹಾನಗರ ಪಾಲಿಕೆ ತಿಳಿಸಿದೆ.
ಸ್ಥಳಕ್ಕೆ ಪೊಲೀಸರು, ಮತ್ತು ರಕ್ಷಣಾ ತಂಡಗಳ ಸಿಬ್ಬಂದಿ ಆಗಮಿಸಿದ್ದು ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.