ದುಷ್ಕರ್ಮಿಗಳಿಂದ ಅರ್ ಎಸ್ ಎಸ್ ಕಾರ್ಯಕರ್ತನ ಹತ್ಯೆ

ದುಷ್ಕರ್ಮಿಗಳಿಂದ ಅರ್ ಎಸ್ ಎಸ್ ಕಾರ್ಯಕರ್ತನ ಹತ್ಯೆ

Nov 12, 2017 06:29:35 PM (IST)
ದುಷ್ಕರ್ಮಿಗಳಿಂದ ಅರ್ ಎಸ್ ಎಸ್ ಕಾರ್ಯಕರ್ತನ ಹತ್ಯೆ

ತ್ರಿಶೂರ್(ಕೇರಳ): ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ ಎಸ್)ದ ಕಾರ್ಯಕರ್ತನೊಬ್ಬನನ್ನು ಕೇರಳದ ತ್ರಿಶೂರ್ ನಲ್ಲಿ ಹತ್ಯೆ ಮಾಡಲಾಗಿದೆ.

ಭಾನುವಾರ ಬೈಕ್ ನಲ್ಲಿ ಹೋಗುತ್ತಿದ್ದ ಆರ್ ಎಸ್ ಎಸ್ ಕಾರ್ಯಕರ್ತ 28ರ ಹರೆಯದ ಆನಂದ್ ಗೆ ಕಾರು ಗುದ್ದಿದ ಬಳಿಕ ಆರು ಮಂದಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆಗೈದಿದ್ದಾರೆ.

ಆನಂದ್ ಸಿಪಿಎಂ ಕಾರ್ಯಕರ್ತನ ಹತ್ಯೆಯ ಆರೋಪಿಯಾಗಿದ್ದು, ಜಾಮೀನನ ಮೇಲೆ ಹೊರಬಂದಿದ್ದ.

ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಆನಂದ್ ನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.