ಪಾಕಿಸ್ತಾನ ಉಗ್ರರಿಗೆ ಬೆಂಬಲ ನೀಡುವುದನ್ನು ನಿಲ್ಲಿಸಬೇಕು: ಮೋದಿ

ಪಾಕಿಸ್ತಾನ ಉಗ್ರರಿಗೆ ಬೆಂಬಲ ನೀಡುವುದನ್ನು ನಿಲ್ಲಿಸಬೇಕು: ಮೋದಿ

May 27, 2016 04:07:16 PM (IST)

ವಾಷಿಂಗ್ಟನ್: ಪಾಕಿಸ್ತಾನ ಉಗ್ರರಿಗೆ ನೀಡುತ್ತಿರುವ ಬೆಂಬಲವನ್ನು ನಿಲ್ಲಿಸಿದರೆ ಭಾರತ -ಪಾಕಿಸ್ತಾನ ದ್ವಿಪಕ್ಷೀಯ ಸಂಬಂಧ ಉನ್ನತ ಮಟ್ಟಕ್ಕೆ ಹೋಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಉಭಯ ದೇಶಗಳ ನಡುವಿನ ಸಂಬಂಧ ವೃದ್ಧಿಗಾಗಿ ನಾವು ಮೊದಲ ಹೆಜ್ಜೆಯಿಡಲು ಸಿದ್ಧರಿದ್ದೇವೆ. ಆದರೆ ಅದು ಒಂದು ಕಡೆಯಿಂದ ಸಾಧ್ಯವಿಲ್ಲ. ಎರಡು ಕಡೆಯಿಂದಲೂ ಆ ಪ್ರಯತ್ನ ನಡೆಯಬೇಕು ಎಂಬುದು ನನ್ನ ಅಭಿಪ್ರಾಯ ಎಂದು ಪ್ರಧಾನಿ ಹೇಳಿದ್ದಾರೆ. ಬಾರತದ-ಪಾಕಿಸ್ತಾನ ಕಿತ್ತಾಡುವುದನ್ನು ಬಿಟ್ಟು ದೇಶದ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನ ಮಾಡಬೇಕು. ಭಯೋತ್ಪಾದನೆಗೆ ನೆರವು ನೀಡುವುದನ್ನು ನಿಲ್ಲಿಸಬೇಕು ಎಂದರು.