ಅಂಫಾನ್ ಚಂಡಮಾರುತಕ್ಕೆ 72 ಮಂದಿ ಬಲಿ

ಅಂಫಾನ್ ಚಂಡಮಾರುತಕ್ಕೆ 72 ಮಂದಿ ಬಲಿ

HSA   ¦    May 21, 2020 05:12:42 PM (IST)
ಅಂಫಾನ್ ಚಂಡಮಾರುತಕ್ಕೆ 72 ಮಂದಿ ಬಲಿ

ನವದೆಹಲಿ: ಅಂಫಾನ್ ಚಂಡಮಾರುತದ ಅಬ್ಬರಕ್ಕೆ 72 ಮಂದಿ ಮೃತಪಟ್ಟಿದ್ದಾರೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಮಾಹಿತಿ ನೀಡಿದೆ.

ಅಂಫಾನ್ ಚಂಡಮಾರುತದಿಂದಾಗಿ ಭಾರೀ ಹಾನಿ ಉಂಟಾಗಿದೆ. ಇದು ಪ.ಬಂಗಾಳ ಮತ್ತು ಬಾಂಗ್ಲಾದೇಶದಲ್ಲಿ ಕಾಣಿಸಿಕೊಂಡಿದೆ. ಪ.ಬಂಗಾಳದಲ್ಲಿ ಸುಮಾರು6.58 ಲಕ್ಷ ಜನರನ್ನು ಸ್ಥಳಾಂತರಿಸಿದ ಹಿನ್ನೆಲೆಯಲ್ಲಿ ಸಾವುನೋವಿನ ಸಂಖ್ಯೆ ಕಡಿಮೆ ಆಗಿದೆ.

ಕಟ್ಟಡ, ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿದೆ. ಒಡಿಶಾದ ಸ್ಥಿತಿ ಕೂಡ ಇದೇ ರೀತಿಯಾಗಿದೆ.