ಮಹಿಳಾ ದಿನಾಚರಣೆ: ಶುಭಾಶಯ ಕೋರಿದ ಮೋದಿ

ಮಹಿಳಾ ದಿನಾಚರಣೆ: ಶುಭಾಶಯ ಕೋರಿದ ಮೋದಿ

Mar 08, 2017 12:33:56 PM (IST)

ಹೊಸದಿಲ್ಲಿ: ವಿಶ್ವದಾದ್ಯಂತ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯಗಳನ್ನು ಕೋರಿದ್ದಾರೆ.

ಮಹಿಳಾ ದಿನಾಚರಣೆ ಹಿನ್ನಲೆಯಲ್ಲಿ ಗುಜರಾತ್'ನ ಗಾಂಧಿ ನಗರದಲ್ಲಿ ಕೇಂದ್ರ ಹಾಗೂ ಗುಜರಾತ್ ಸರ್ಕಾರ ಗ್ರಾಮೀಣ ಅಭಿವೃದ್ಧಿ ಇಲಾಖೆ ವತಿಯಿಂದ ಮಹಿಳಾ ಸರ್'ಪಂಚ್ ಗಳಿಗಾಗಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಕಾರ್ಯಕ್ರಮದಲ್ಲಿ ಮಹಿಳೆಯರನ್ನುದ್ದೇಶಿ ಪ್ರಧಾನಮಂತ್ರಿ ನರೇಂದ್ರಮೋದಿಯವರು ಮಾತನಾಡಲಿದ್ದಾರೆ. ಅಲ್ಲದೆ, ಉತ್ತಮ ಸಾಧನೆ ಮಾಡಿದ ಮಹಿಳೆಯರಿಗೆ ಇದೇ ವೇಳೆ ಗೌರವವನ್ನು ಸಲ್ಲಿಸಲಾಗುತ್ತದೆ.  

ನಾರೀಯರ ಅದಮ್ಯ ಚೇತನ, ಸಂಕಲ್ಪ ಹಾಗೂ ಅವಲ್ಲಿರುವ ಸಮರ್ಪಣೆಯ ಭಾವಕ್ಕೆ ಈ ಮೂಲಕ ಸೆಲ್ಯೂಟ್ ಹೊಡೆಯುತ್ತಿದ್ದೇನೆ ಹಾಗೂ ಎಲ್ಲಾ ಮಹಿಳೆಯರಿಗೂ ಮೂಲಕ ವಿಶ್ವ ಮಹಿಳಾ ದಿನಾಚರಣೆ ಶುಭಾಶಯಗಳನ್ನು ಕೋರುತ್ತಿದ್ದೇನೆಂದು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.