ಕಾಂಗ್ರೆಸ್ ಜತೆಗೆ ಎನ್ ಸಿಪಿ ವಿಲೀನವಿಲ್ಲ: ಶರದ್ ಪವಾರ್ ಸ್ಪಷ್ಟನೆ

ಕಾಂಗ್ರೆಸ್ ಜತೆಗೆ ಎನ್ ಸಿಪಿ ವಿಲೀನವಿಲ್ಲ: ಶರದ್ ಪವಾರ್ ಸ್ಪಷ್ಟನೆ

HSA   ¦    Oct 09, 2019 03:21:07 PM (IST)
ಕಾಂಗ್ರೆಸ್ ಜತೆಗೆ ಎನ್ ಸಿಪಿ ವಿಲೀನವಿಲ್ಲ: ಶರದ್ ಪವಾರ್ ಸ್ಪಷ್ಟನೆ

ಮುಂಬಯಿ: ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ಅಧ್ಯಕ್ಷ ಶರದ್ ಪವಾರ್ ಅವರು ಕಾಂಗ್ರೆಸ್ ನೊಂದಿಗೆ ಪಕ್ಷವನ್ನು ವಿಲೀನಗೊಳಿಸುವ ವಿಚಾರವನ್ನು ತಳ್ಳಿ ಹಾಕಿದ್ದಾರೆ.

ಮಂಗಳವಾರ ಕಾಂಗ್ರೆಸ್ ನಾಯಕ ಸುಶೀಲ್ ಕುಮಾರ್ ಶಿಂಧೆ ಅವರು ಪವಾರ್ ಅವರನ್ನು ಭೇಟಿ ಮಾಡಿದ್ದರು. ಇದರಿಂದ ಕಾಂಗ್ರೆಸ್ ಪಕ್ಷದೊಂದಿಗೆ ಎನ್ ಸಿಪಿ ವಿಲೀನವಾಗಲಿದೆ ಎನ್ನುವ ಸುದ್ದಿ ಹಬ್ಬಿತ್ತು.

ಕಾಂಗ್ರೆಸ್ ಮತ್ತು ಎನ್ ಸಿಪಿ ಪಕ್ಷವು ಬೇರೆ ಬೇರೆಯಾಗಿದ್ದರೂ ಅದು ಭವಿಷ್ಯದಲ್ಲಿ ಒಂದಾಗಬಹುದು ಮತ್ತು ಕಾಂಗ್ರೆಸ್ ನ ಏಕೀಕರಣವಾಗಬಹುದು ಎಂದು ಸುಶೀಲ್ ಕುಮಾರ್ ಶಿಂಧೆ ಅವರು ಚುನಾವಣಾ ಪ್ರಚಾರ ಭಾಷಣದಲ್ಲಿ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಶರದ್ ಪವಾರ್, ಕಾಂಗ್ರೆಸ್ ನಾಯಕರು ಅವರ ಪಕ್ಷದ ಬಗ್ಗೆ ಮಾತನಾಡಬಹುದು. ಆದರೆ ಎನ್ ಸಿಪಿ ಬಗ್ಗೆ ನನಗಿಂತ ಚೆನ್ನಾಗಿ ಯಾರಿಗೂ ತಿಳಿದಿಲ್ಲ ಎಂದರು.