ಲೋಕಸಭೆ ಚುನಾವಣೆ: ಉತ್ತರ ಪ್ರದೇಶದಲ್ಲಿ ಅಭ್ಯರ್ಥಿಯೇ ನಾಪತ್ತೆ

ಲೋಕಸಭೆ ಚುನಾವಣೆ: ಉತ್ತರ ಪ್ರದೇಶದಲ್ಲಿ ಅಭ್ಯರ್ಥಿಯೇ ನಾಪತ್ತೆ

HSA   ¦    May 15, 2019 06:14:11 PM (IST)
ಲೋಕಸಭೆ ಚುನಾವಣೆ: ಉತ್ತರ ಪ್ರದೇಶದಲ್ಲಿ ಅಭ್ಯರ್ಥಿಯೇ ನಾಪತ್ತೆ

ಲಕ್ನೋ: ಲೋಕಸಭೆ ಚುನಾವಣೆಗೆ ಅಂತಿಮ ಹಂತದ ಮತದಾನವು ಮೇ 19ರಂದು ನಡೆಯಲಿದ್ದು, ಚುನಾವಣಾ ಸಮರದಲ್ಲಿ ಅಭ್ಯರ್ಥಿಯೊಬ್ಬರು ನಾಪತ್ತೆಯಾಗಿದ್ದಾರೆ.

ಘೋಸಿ ಕ್ಷೇತ್ರದ ಬಿಎಸ್ ಪಿ ಅಭ್ಯರ್ಥಿ ಅತುಲ್ ರಾಯ್ ಕಳೆದ 15 ದಿನಗಳಿಂದ ನಾಪತ್ತೆಯಾಗಿದ್ದಾರೆ. ಇಲ್ಲಿ ಕೊನೆಯ ಹಂತದಲ್ಲಿ ಮತದಾನ ನಡೆಯಲಿದೆ.

ಮೇ 1ರಂದು ವಿದ್ಯಾರ್ಥಿನಿಯೊಬ್ಬರು ಅತುಲ್ ರಾಯ್ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದರು. ಇದರ ಬಳಿಕ ಅವರು ತಲೆಮರೆಸಿಕೊಂಡಿದ್ದಾರೆ.

ಬಂಧನ ಭೀತಿಯಿಂದಾಗಿ ಅತುಲ್ ರಾಯ್ ಮಲೇಶಿಯಾಗೆ ಹೋಗಿ ತಲೆಮರೆಸಿಕೊಂಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಎಸ್ ಪಿ ಮತ್ತು ಬಿಎಸ್ ಪಿ ಪಕ್ಷದ ಕಾರ್ಯಕರ್ತರು ಮಾತ್ರ ಅವರ ಪರವಾಗಿ ಪ್ರಚಾರ ಮುಂದುವರಿಸಿದ್ದಾರೆ.