ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಮೊಮ್ಮಗ ಅಪಘಾತದಲ್ಲಿ ಸಾವು

ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಮೊಮ್ಮಗ ಅಪಘಾತದಲ್ಲಿ ಸಾವು

May 29, 2016 06:20:32 PM (IST)

ಹೊಸದಿಲ್ಲಿ: ಹಿಮಾಚಲ ಪ್ರದೇಶದಲ್ಲಿ ಭಾನುವಾರ ನಡೆದ ರಸ್ತೆ ಅಪಘಾತವೊಂದರಲ್ಲಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಮೊಮ್ಮಗ ಅಭಿಜಿತ್ ಸಿಂಗ್ ಸಂದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಹಿಮಾಚಲ ಪ್ರದೇಶದ ರಾಮಪುರ ಬುಶಹರ್​ನಲ್ಲಿ ಈ ದುರಂತ ಸಂಭವಿಸಿದ್ದು, ಭಗತ್ ಸಿಂಗ್ ಅವರ ಮೊಮ್ಮಗ ಅಭಿತೇಜ್ ಸಿಂಗ್ ಸಂಧು(22) ಅವರ ಬೈಕ್  ಅಪಘಾತಕ್ಕೀಡಾಗಿದೆ. ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಭಿತೇಜ್ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತ ಅಭಿತೇಜ್ ಸಿಂಗ್ ಸಂಧು ಆಮ್  ಆದ್ಮಿ ಪಕ್ಷದ ಹಿಮಾಚಲಪ್ರದೇಶ ಘಟಕದ ಮುಖಂಡರು ಕೂಡ ಆಗಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ.

ಅಭಿತೇಜ್ ತಂದೆ ಅಭಯ್ ಸಿಂಗ್ ಅವರು ಭಗತ್ ಸಿಂಗ್ ಅವರ ಕಿರಿಯ ಪುತ್ರರಾಗಿದ್ದಾರೆ. ಅವರ ಆತ್ಮಕ್ಕೆ ಶಂಆತಿ ದೊರಕಲಿ ಹಾಗೂ ಕುಟುಂಬಕ್ಕೆ ಸಾವಿನ ನೋವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.