ಗಸ್ತು ತಿರುಗುತ್ತಿದ್ದಾಗ ಸ್ಫೋಟಗೊಂಡ ಬಾಂಬ್: ಇಬ್ಬರು ಯೋಧರು ಬಲಿ

ಗಸ್ತು ತಿರುಗುತ್ತಿದ್ದಾಗ ಸ್ಫೋಟಗೊಂಡ ಬಾಂಬ್: ಇಬ್ಬರು ಯೋಧರು ಬಲಿ

Nov 13, 2017 02:01:41 PM (IST)
ಗಸ್ತು ತಿರುಗುತ್ತಿದ್ದಾಗ ಸ್ಫೋಟಗೊಂಡ ಬಾಂಬ್: ಇಬ್ಬರು ಯೋಧರು ಬಲಿ

ಇಂಫಾಲ: ಅಸ್ಸಾಮಿನ ಯೋಧರು ಇಂದು ಬೆಳಗ್ಗೆ ಗಸ್ತು ತಿರುಗುತ್ತಿದ್ದಾಗ ಸ್ಫೋಟಕ ಸಾಧನವೊಂದು ಸ್ಫೋಟಗೊಂಡ ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಅಧಿಕೃತ ವರದಿಗಳು ಹೇಳಿವೆ.

ಮಣಿಪುರದ ಚಂದೇಲ್ ನಲ್ಲಿ ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದೆ. ಘಟನೆಯಲ್ಲಿ ನಾಲ್ಕು ಮಂದಿ ಯೋಧರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಸ್ಸಾಂನಲ್ಲಿರುವ ಕೆಲವು ಉಗ್ರಗಾಮಿ ಸಂಘಟನೆಗಳು ಈ ಕೃತ್ಯವೆಸಗಿರಬಹುದು ಎಂದು ನಂಬಲಾಗಿದೆ.