News Karnataka Kannada
Thursday, April 25 2024
ಸಂಪಾದಕರ ಆಯ್ಕೆ

ಖ್ಯಾತ ಬಾಲಿವುಡ್‌ ನಟ ದಿಲೀಪ್ ಕುಮಾರ್ ಆಸ್ಪತ್ರೆಗೆ ದಾಖಲು

Bollywood Dileep 30 6 21
Photo Credit :

ಮುಂಬೈ: ಖ್ಯಾತ ಬಾಲಿವುಡ್‌ ನಟ ದಿಲೀಪ್ ಕುಮಾರ್‌ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅವರನ್ನು ಮಂಗಳವಾರ ರಾತ್ರಿ ಖಾರ್‌ ಉಪ ನಗರದ ಹಿಂದೂಜಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಜೂನ್ 6 ರಂದು ಇದೇ ರೀತಿ ಉಸಿರಾಟದ ತೊಂದರೆಯಿಂದಾಗಿ ದಿಲೀಪ್ ಕುಮಾರ್ ಅವರನ್ನು ಇದೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹತ್ತು ದಿನಗಳ ಹಿಂದೆ ಗುಣಮುಖರಾಗಿ ಅವರು ಮನೆಗೆ ತೆರಳಿದ್ದರು.ಉಸಿರಾಟ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿದ್ದರಿಂದ, ವಯಸ್ಸು ಮತ್ತು ಇತ್ತೀಚೆಗಿನ ಅನಾರೋಗ್ಯದ ಸಮಸ್ಯೆಯನ್ನು ಗಮನಿಸಿದ ಕುಟುಂಬದ ಸದಸ್ಯರು ಮುನ್ನೆಚ್ಚರಿಕೆ ಕ್ರಮವಾಗಿ ದಿಲೀಪ್ ಕುಮಾರ್ ಅವರನ್ನು ಆಸ್ಪತ್ರೆ ದಾಖಲಿಸಿದ್ದಾರೆ. ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗ ಚೆನ್ನಾಗಿದ್ದಾರೆ‘ ಎಂದು ಮೂಲಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು