ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅಂತರದಲ್ಲಿ 41,383 ಕೋವಿಡ್ ಪ್ರಕರಣ ಪತ್ತೆಯಾಗಿದೆ. ಇದೇ ಅವಧಿಯಲ್ಲಿ ಸೋಂಕಿನಿಂದ 507 ಮಂದಿ ಮೃತಪಟ್ಟಿದ್ದು, 38,652 ಮಂದಿ ಗುಣಮುಖರಾಗಿದ್ದಾರೆ.
ಕೆಲ ದಿನಗಳ ಬಳಿಕ ಕೋವಿಡ್ ಚೇತರಿಕೆ ಪ್ರಮಾಣಕ್ಕಿಂತ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ.
ಭಾರತ ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 3,12,57,720 ಆಗಿದ್ದು, ಈ ಪೈಕಿ 3,04,29,339 ಮಂದಿ ಚೇತರಿಸಿಕೊಂಡಿದ್ದಾರೆ ಹಾಗೂ ಕೋವಿಡ್ ಕಾರಣಗಳಿಂದಾಗಿ 4,18,987 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ 4,09,394 ಪ್ರಕರಣಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.