News Kannada
Tuesday, December 06 2022

ದೇಶ

ರಾಜ್ಯಗಳಿಗೆ ಈವರೆಗೂ 47.48 ಕೋಟಿ ಡೋಸ್‌ ಲಸಿಕೆ ಸರಬರಾಜು ಮಾಡಿದ ಕೇಂದ್ರ

Photo Credit :

ನವದೆಹಲಿ, – ದೇಶದಲ್ಲಿ ಇದುವರೆಗೂ 47.48 ಕೋಟಿ ಡೋಸ್ ಲಸಿಕೆಯನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಕೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಒಟ್ಟಾರೆ ಪೂರೈಕೆಯಾದ 47,48,77,490 ಡೋಸ್ ಲಸಿಕೆ ಪೈಕಿ ವ್ಯರ್ಥವಾಗಿರುವ ಲಸಿಕೆಯು ಸೇರಿದಂತೆ 44,74,97,240 ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಪೂರೈಕೆ ಮಾಡಿರುವ ಒಟ್ಟು ಲಸಿಕೆಯ ಬಗ್ಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನು 2,88,55,055 ಡೋಸ್ ಲಸಿಕೆ ಬಾಕಿ ಉಳಿದಿದೆ ಇದನ್ನ ಅರ್ಹ ವ್ಯಕ್ತಿಗಳಿಗೆ ನೀಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದೆ
ಬಾಕಿ ಇರುವ ಲಸಿಕೆ ಅಲ್ಲದೆ ಇನ್ನೂ ಹೆಚ್ಚುವರಿಯಾಗಿ 53,05,260 ಡೋಸ್ ಲಸಿಕೆಯನ್ನು ಪೂರೈಕೆ ಮಾಡಲಾಗುತ್ತಿದೆ ಎಂದು ಹೇಳಿದೆ.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಅವುಗಳ ಬೇಡಿಕೆ ಆಧರಿಸಿ ಲಸಿಕೆಯನ್ನು ಆದ್ಯತೆ ಮೇರೆಗೆ ಪೂರೈಕೆ ಮಾಡಲಾಗುತ್ತಿದೆ ಮುಂದೆಯೂ ಕೂಡ ಲಸಿಕೆಯನ್ನು ರಾಜ್ಯಗಳ ಜನಸಂಖ್ಯೆಗೆ ಪೂರಕವಾಗಿ ಪೂರೈಸಲಾಗುವುದು ಎಂದು ತಿಳಿಸಿದೆ.
ದೇಶದಲ್ಲಿ ಒಟ್ಟಾರೆ ಉತ್ಪಾದನೆಯಾಗುವ ಲಸಿಕೆಯ ಪೈಕಿ ಶೇಕಡ 75ರಷ್ಟು ಲಸಿಕೆಯನ್ನು ಕೇಂದ್ರ ಸರ್ಕಾರ ಔಷಧ ತಯಾರಿಕಾ ಸಂಸ್ಥೆಗಳಿಂದ ಖರೀದಿ ಮಾಡಿ ರಾಜ್ಯಗಳಿಗೆ ಉಚಿತವಾಗಿ ಸರಬರಾಜು ಮಾಡುತ್ತಿದೆ.
ಇನ್ನೂ ಶೇಕಡ 25ರಷ್ಟು ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳು ಮತ್ತು ರಾಜ್ಯ ಸರ್ಕಾರಗಳು ಆದ್ಯತೆ ಬೆಲೆಗೆ ಖರೀದಿಸಲು ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಲಾಗಿದೆ.

See also  60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ನಾಲ್ಕನೇ ಡೋಸ್ ಅನುಮೋದಿಸಿದ ಇಸ್ರೆಲ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು