ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಚೇತರಿಕೆ ಪ್ರಮಾಣಕ್ಕಿಂತ ಸೋಂಕು ದೃಢಪಟ್ಟ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿದೆ.
ಕಳದ 24 ಗಂಟೆಗಳ ಅಂತರದಲ್ಲಿ ಕೋವಿಡ್–19 ದೃಢಪಟ್ಟ 40,134 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 422 ಮಂದಿ ಸಾವಿಗೀಡಾಗಿದ್ದು, 36,946 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಒಟ್ಟು 3,16,95,958 ಪ್ರಕರಣಗಳ ಪೈಕಿ, ಈವರೆಗೂ 3,08,57,467 ಮಂದಿ ಚೇತರಿಸಿಕೊಂಡಿದ್ದಾರೆ ಹಾಗೂ 4,24,773 ಜನ ಮೃತಪಟ್ಟಿದ್ದಾರೆ. ದೇಶದಲ್ಲಿ ಪ್ರಸ್ತುತ 4,13,718 ಪ್ರಕರಣಗಳು ಸಕ್ರಿಯವಾಗಿವೆ.
ಕೇರಳದಲ್ಲಿ 1,67,891 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 82,350 ಪ್ರಕರಣಗಳು ಹಾಗೂ ಕರ್ನಾಟಕದಲ್ಲಿ 24,168 ಪ್ರಕರಣಗಳು ಸಕ್ರಿಯವಾಗಿವೆ.