News Kannada
Tuesday, December 06 2022

ದೇಶ

ಕೋವಿಡ್‌: 24 ಗಂಟೆಗಳಲ್ಲಿ 42,982 ಸೋಂಕು ಪ್ರಕರಣಗಳು ಪತ್ತೆ

coivd 19
Photo Credit :

ನವದೆಹಲಿ: ದೇಶದಲ್ಲಿ ಮತ್ತೆ ಕೋವಿಡ್-19 ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 42,982 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

24 ಗಂಟೆಗಳ ಅಂತರದಲ್ಲಿ 42,982 ಹೊಸ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 3,18,12,114ಕ್ಕೆ ಏರಿಕೆಯಾಗಿದೆ. ಅಂತೆಯೇ ಒಂದೇ ದಿನ 533 ಮಂದಿ ಸೋಂಕಿತರು ಸಾವಿಗೀಡಾಗಿದ್ದು, ಆ ಮೂಲಕ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 4,26,290ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 41,726 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಈ ವರೆಗೂ ಗುಣಮುಖರಾದವರ ಸಂಖ್ಯೆ 3,09,74,748ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 4,11,076 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ನಿನ್ನೆ ದೇಶಾದ್ಯಂತ 16,64,030 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ದೇಶದಲ್ಲಿ ಈ ವರೆಗೂ ನಡೆಸಿದ ಕೋವಿಡ್ ಪರೀಕ್ಷೆಗಳ ಸಂಖ್ಯೆ 47,48,93,363ಕ್ಕೆ ಏರಿಕೆಯಾಗಿದೆ.

See also  100 ಕೋಟಿ ಕೋವಿಡ್​ ವ್ಯಾಕ್ಸಿನೇಷನ್​: ಭಾರತದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಅಮೆರಿಕ- ಇಸ್ರೇಲ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು