ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಅನ್ನು ತಾಲಿಬಾನ್ ವಶಕ್ಕೆ ಪಡೆದ ನಂತರ ಅಲ್ಲಿರುವ ಭಾರತೀಯರನ್ನು ಸ್ಥಳಾಂತರಿಸಲು ಪ್ರಯತ್ನಿಸಲಾಗುತ್ತಿದೆ. 85 ಭಾರತೀಯರನ್ನು ಹೊತ್ತ ಭಾರತೀಯ ವಾಯುಪಡೆಯ ಸಿ-130 ಜೆ ವಿಮಾನ ಇಂದು ಬೆಳಗ್ಗೆ ಕಾಬೂಲ್ ನಿಂದ ಪ್ರಯಾಣ ಆರಂಭಿಸಿದೆ.
ಕಾಬೂಲ್ ನಿಂದ ಟೇಕಾಪ್ ಆದ ವಿಮಾನ ಇಂಧನ ತುಂಬಿಸಿಕೊಳ್ಳುವ ಸಲುವಾಗಿ ತಜಕಿಸ್ತಾನ್‌ನಲ್ಲಿ ಇಳಿದಿದೆ. ಕಾಬೂಲ್ ನಿಂದ ಭಾರತೀಯ ನಾಗರಿಕರನ್ನು ಸ್ಥಳಾಂತರಿಸಲು ಭಾರತೀಯ ಅಧಿಕಾರಿಗಳು ನೆರವಾಗುತ್ತಿದ್ದಾರೆ ಎಂದು ಮೂಲಗಳು ಹೇಳಿರುವುದಾಗಿ ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಸರ್ಕಾರ ಸಂಘಟಿತ ಪ್ರಯತ್ನದೊಂದಿಗೆ ಭಾರತೀಯ ನಾಗರಿಕರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ವಾಪಸ್ ಕರೆತರುತ್ತಿದೆ.