ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್‌ಕೌಂಟರ್ ನಡೆಸಿದ್ದು ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದ ನಾಗಬೀರನ್ ತ್ರಾಲ್’ನ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿದುಬಂದ ಹಿನ್ನೆಲೆಯಲ್ಲಿ ಶನಿವಾರ ಬೆಳಿಗ್ಗೆ ಸೇನಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು.
ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಸ್ಥಳವನ್ನು ಸುತ್ತುವರೆದು ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಮಾರ್ಪಡಿಸಿ ಇದೀಗ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.