ವಿಜಯವಾಡ : ರಾಹುಲ್ ಗಾಂಧಿ ಟ್ವಿಟ್ಟರ್ ಖಾತೆಯನ್ನು ಅಮಾನತುಗೊಳಿಸಿದ್ದರಿಂದ ಆಕ್ರೋಶಗೊಂಡ ಕಾಂಗ್ರೆಸ್ ನಾಯಕರು ಟ್ವಿಟರ್ ಪಕ್ಷಿಯನ್ನು ಬೇಯಿಸಿದ್ದ ವಿಡಿಯೋ ವೈರಲ್ ಆಗಿತ್ತು.ಇದರಿಂದ ಪಕ್ಷಕ್ಕೆ ಮುಜುಗರ ಉಂಟಾಗಿದ್ದು . ಈ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಕಾಂಗ್ರೆಸ್ ಕಮಿಟಿ(ಎಪಿಸಿಸಿ) ಜಿವಿ ಶ್ರೀರಾಜ್ ನನ್ನು ಪಕ್ಷದಿಂದ ವಜಾ ಮಾಡಿದೆ.
ಎಪಿಸಿಸಿ ಅಧ್ಯಕ್ಷ ಎಲ್ ಈಶ್ವರ ರಾವ್ ಅವರು ಶ್ರೀರಾಜ್ ನನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿದರು.
ಶ್ರೀರಾಜ್ ವರ್ತನೆ ಕಾಂಗ್ರೆಸ್ ಪಕ್ಷದ ಘನತೆಗೆ ಧಕ್ಕೆ ತಂದಿದೆ. ಅಲ್ಲದೆ ರಾಹುಲ್ ಗಾಂಧಿ ಹೆಸರನ್ನು ಕಾಂಗ್ರೆಸ್ ಪಕ್ಷದ ಮೌಲ್ಯಗಳನ್ನು ಕುಸಿಯುವ ರೀತಿಯಲ್ಲಿ ಬಳಸಿದ್ದಾರೆ ಎಂದು ಆದೇಶದಲ್ಲಿ ಹೇಳಲಾಗಿದೆ.
ಜಿವಿ ಶ್ರೀರಾಜ್ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಸಂಸದ ಜಿವಿ ಹರ್ಷ ಕುಮಾರ್ ಅವರ ಪುತ್ರ. ರಾಹುಲ್ ಗಾಂಧಿ ಟ್ವೀಟರ್ ಖಾತೆಯನ್ನು ಅಮಾನತುಗೊಳಿಸಿದ ಕ್ರಮವನ್ನು ಖಂಡಿಸುವ ಭರದಲ್ಲಿ ಇದೀಗ ತಮ್ಮ ಪ್ರಾಥಮಿಕ ಸದಸ್ಯತ್ವವನ್ನೇ ಕಳೆದುಕೊಳ್ಳಬೇಕಾಗಿದೆ.