ನವದೆಹಲಿ: ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನ ಬೆಳ್ಳಿ ದರ ಇಳಿಕೆ ಕಂಡಿದೆ. 10 ಗ್ರಾಂ ಚಿನ್ನದ ದರ ₹ 265ರಷ್ಟು ಇಳಿಕೆ ಆಗಿದ್ದು ₹ 46,149ರಂತೆ ಮಾರಾಟವಾಗಿದೆ.
ಬೆಳ್ಳಿ ಧಾರಣೆ ಕೆ.ಜಿ.ಗೆ ₹ 323ರಷ್ಟು ಕಡಿಮೆಯಾಗಿ ₹ 61,653ಕ್ಕೆ ತಲುಪಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಹಾಗೂ ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ಇಳಿಕೆಯಿಂದಾಗಿ ದೇಶಿ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಆಗಿದೆ.