NewsKarnataka
Wednesday, January 19 2022

ದೇಶ

ಕೋವಿಡ್ ಮಾರ್ಗಸೂಚಿ ಸೆಪ್ಟೆಂಬರ್ ಅಂತ್ಯದ ವರೆಗೆ ಕೇಂದ್ರದಿಂದ ವಿಸ್ತರಣೆ

ನವದೆಹಲಿ, ; ದೇಶದಲ್ಲಿ ಚಾಲ್ತಿಯಲ್ಲಿರುವ ಕೋವಿಡ್ ಮಾರ್ಗಸೂಚಿಗಳನ್ನು ಮುಂದಿನ ತಿಂಗಳ ಅಂತ್ಯದವರೆಗೆ ( ಸೆಪ್ಟೆಂಬರ್ ಅಂತ್ಯ) ವಿಸ್ತರಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ.
ಈ ಸಂಬಂಧ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಬಲ್ಲಾ ಅವರು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದು ಜಿಲ್ಲೆಗಳು ಮತ್ತು ಸ್ಥಳೀಯ ಆಡಳಿತಗಳು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ದೇಶದ ಕೆಲವು ರಾಜ್ಯಗಳಲ್ಲಿ ಸೋಂಕು ಸಂಖ್ಯೆ ನಿತ್ಯ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳೂ ಏರಿಕೆಯಾಗಿವೆ. ಇದರಿಂದಾಗಿ ಕೆಲವು ಜಿಲ್ಲೆಗಳಲ್ಲಿ ಪಾಸಿಟಿವಿಟಿ ಪ್ರಮಾಣ ಅಧಿಕವಾಗಿದೆ. ಇದನ್ನು ನಿಯಂತ್ರಿಸಲು ಆದ್ಯತೆ ನೀಡಬೇಕು ಎಂದು ಅವರು ಸೂಚಿಸಿದ್ದಾರೆ.ಅತಿ ಹೆಚ್ಚಿನ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಸೂಚಿಸಿರುವ ಅವರು, ಹಬ್ಬ ಹರಿದಿನಗಳಲ್ಲಿ ಜನ ಸೇರುವುದು, ಒಂದೆಡೆ ಹೆಚ್ಚು ಸಂಖ್ಯೆಯ ಜನ ಸಮೂಹ ಸೇರುವುದಕ್ಕೆ ನಿಯಂತ್ರಣ ಹೇರಬೇಕು ಎಂದು ತಿಳಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145
Subscribe to our Brand New YouTube Channel

Subscribe Newsletter

Get latest news karnataka updates on your email.