ಟೋಕಿಯೊ : ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಸೋಮವಾರ ನಡೆದ ಪುರುಷರ ಜಾವೆಲಿನ್ ಥ್ರೋ ಅಂತಿಮ ಸ್ಪರ್ಧೆಯಲ್ಲಿ ಭಾರತದ , ಸುಂದರ್ ಸಿಂಗ್ ಗುರ್ಜಾರ್ ಅವರು ಮೂರನೇ ಸ್ಥಾನ ಪಡೆದು ಕಂಚಿನ ಪದಕ ಗೆದ್ದಿದ್ದಾರೆ.
ಸುಂದರ್ ಸಿಂಗ್ ಗುರ್ಜಾರ್ ಅವರು 64.01 ಮೀ. ಗಳ ಅತ್ಯುತ್ತಮ ಎಸೆತದೊಂದಿಗೆ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತ ಈ ವರೆಗೆ 1 ಚಿನ್ನ, 4 ಬೆಳ್ಳಿ ಮತ್ತು 2 ಕಂಚಿನ ಪದಕದೊಂದಿಗೆ ಒಟ್ಟು 7 ಪದಕ ಗೆದ್ದಂತಾಗಿದೆ.