News Kannada
Sunday, November 27 2022

ದೇಶ

ದೇಶದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಅಲ್ಪ ಏರಿಕೆ - 1 min read

Photo Credit :

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಅಲ್ಪ ಏರಿಕೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 42,909 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 42,909 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು,ದೇಶದಲ್ಲಿ ಪತ್ತೆಯಾದ ದೈನಂದಿನ ಪ್ರಕರಣಗಳ ಪೈಕಿ ಶೇ.50ಕ್ಕೂ ಹೆಚ್ಚು ಪ್ರಕರಣಗಳು ಕೇರಳದಲ್ಲಿ ವರದಿಯಾಗಿದ್ದು, ಗರಿಷ್ಠ ಅಂದರೆ 29,836 ಸೋಂಕು ಪ್ರಕರಣಗಳ ಪತ್ತೆಯಾಗಿದೆ.

ಇದೇ ಅವಧಿಯಲ್ಲಿ 34,763 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಆ ಮೂಲಕ ದೇಶದಲ್ಲಿನ ಒಟ್ಟಾರೆ ಗುಣಮುಖರ ಸಂಖ್ಯೆ 3,19,23,405 ಕ್ಕೆ ಏರಿಕೆಯಾಗಿದೆ. ಅಂತೆಯೇ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 380 ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ಕೋವಿಡ್ ಬಲಿಯಾದವರ ಸಂಖ್ಯೆ 4,38,210ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 3,76,324 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

See also  ದೈನಂದಿನ ಕೋವಿಡ್ -19 ಪ್ರಕರಣಗಳು 18,166 ಕ್ಕೆ ಇಳಿಕೆ, 200 ದಿನಗಳಲ್ಲಿ ಇಂದೇ ಕಡಿಮೆ ಪಾಸಿಟಿವ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು