News Kannada
Saturday, October 01 2022

ದೇಶ

ಚಿನ್ನ ಆಮದು: ಆಗಸ್ಟ್‌ ತಿಂಗಳಲ್ಲಿ ಎರಡು ಪಟ್ಟು ಹೆಚ್ಚಳ - 1 min read

Photo Credit :

ಮುಂಬೈ: ಚಿನ್ನದ ಆಮದು ಪ್ರಮಾಣವು ಆಗಸ್ಟ್‌ನಲ್ಲಿ ಎರಡು ಪಟ್ಟು ಹೆಚ್ಚಾಗಿದ್ದು, ಐದು ತಿಂಗಳ ಗರಿಷ್ಠ ಮಟ್ಟಕ್ಕೆ ತಲುಪಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಚಿನ್ನದ ಬೆಲೆ ಇಳಿಕೆ ಆಗಿರುವುದರಿಂದ ಹಾಗೂ ಹಬ್ಬದ ಋತುವಿನ ಬೇಡಿಕೆಯನ್ನು ಪೂರೈಸಲು ವ್ಯಾಪಾರಿಗಳು ಹೆಚ್ಚಿನ ಖರೀದಿ ನಡೆಸಿದ್ದಾರೆ. ಭಾರತವು 2020ರ ಆಗಸ್ಟ್‌ನಲ್ಲಿ 63 ಟನ್‌ ಚಿನ್ನ ಆಮದು ಮಾಡಿಕೊಂಡಿತ್ತು.

ಆಮದು ಪ್ರಮಾಣವು 2021ರ ಆಗಸ್ಟ್‌ನಲ್ಲಿ 121 ಟನ್‌ಗೆ ಏರಿಕೆ ಆಗಿದೆ ಎಂದು ಹೆಸರು ಬಹಿರಂಗ ಪಡಿಸಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೌಲ್ಯದ ಲೆಕ್ಕದಲ್ಲಿ ₹ 27,047 ಕೋಟಿಗಳಿಂದ ₹ 48,977 ಕೋಟಿಗಳಿಗೆ ಏರಿಕೆ ಆಗಿದೆ.

ಚಿನ್ನದ ಆಮದು ಹೆಚ್ಚಾಗುವುದರಿಂದ ದೇಶದ ವ್ಯಾಪಾರ ಕೊರತೆ ಅಂತರ ಮತ್ತು ರೂಪಾಯಿ ಮೇಲೆ ಒತ್ತಡ ಹೆಚ್ಚುವ ಅಂದಾಜು ಮಾಡಲಾಗಿದೆ.

See also  ವಿದೇಶಿ ಪ್ರವಾಸಿಗರಿಗೆ ಶೀಘ್ರದಲ್ಲೇ ಭಾರತಕ್ಕೆ ಭೇಟಿ ನೀಡಬಹುದು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು