News Kannada
Wednesday, February 01 2023

ದೇಶ

ದೇಶದಲ್ಲಿ 30,570 ಕೋವಿಡ್‌ ಪ್ರಕರಣ, 431 ಸಾವು

Photo Credit :

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 30,570 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 431 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಗುರುವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,33,47,325ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,43,928ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,42,923ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 38,303 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,25,60,474ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 15,79,761 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 54,77,01,729 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

 

See also  ಇಂಗ್ಲೆಂಡ್ ನಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ಇಂದಿನಿಂದ ಹೊಸ ಕೋವಿಡ್ ನಿಮಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು