NewsKarnataka
Tuesday, December 07 2021

ದೇಶ

ದಾಖಲೆಯ ಎರಡು ಕೋಟಿಗೂ ಹೆಚ್ಚು ಮಂದಿಗೆ ಕೋವಿಡ್ ಲಸಿಕೆ

ನವದೆಹಲಿ: ಕೋವಿಡ್ ಲಸಿಕೆ ಅಭಿಯಾನದಲ್ಲಿ ಭಾರತ ಶುಕ್ರವಾರ ಹೊಸ ಮೈಲುಗಲ್ಲು ಸಾಧಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಇಂದು ದೇಶಾದ್ಯಂತ ದಾಖಲೆಯ ಎರಡು ಕೋಟಿಗೂ ಹೆಚ್ಚು ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ.

“ಪ್ರಧಾನಿ ಮೋದಿಯವರ ಜನ್ಮದಿನದಂದು ದೇಶಾದ್ಯಂತ ಎರಡು ಕೋಟಿ ಡೋಸ್ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು ಎಂದು ಕೇಂದ್ರ ಸರ್ಕಾರದ ಉನ್ನತ ಮೂಲಗಳು ಈ ಮುಂಚೆ ತಿಳಿಸಿದ್ದವು.

ಆರೋಗ್ಯ ಕಾರ್ಯಕರ್ತರು ಮತ್ತು ದೇಶದ ಜನರ ಪರವಾಗಿ ಪ್ರಧಾನಿಗೆ ಇದು ಉಡುಗೊರೆ. ಇಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದಂದು, ಭಾರತವು ಒಂದೇ ದಿನದಲ್ಲಿ ಎರಡು ಕೋಟಿ ಡೋಸ್ ಲಸಿಕೆ ನೀಡುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದೆ’ಎಂದು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!