NewsKarnataka
Friday, November 26 2021

ದೇಶ

ದೇಶದಲ್ಲಿ 29,616 ಹೊಸ ಕೋವಿಡ್‌ ಪ್ರಕರಣ

coivd 19

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 29,616 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಪ್ರಕಟಣೆ ತಿಳಿಸಿದೆ.

ಈ ಮೂಲಕ ದೇಶದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 3,36,24,419ಕ್ಕೆ ಏರಿದಂತಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿದೆ. ಇದೇ ಅವಧಿಯಲ್ಲಿ 1,280 ಹೊಸ ಪ್ರಕರಣಗಳೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,01,4421ಕ್ಕೇರಿದಂತಾಗಿದೆ. ಒಟ್ಟು ಸೋಂಕಿನ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.90ರಷ್ಟು ಎಂದು ಸಚಿವಾಲಯ ತಿಳಿಸಿದೆ.

ಇದೇ ಅವಧಿಯಲ್ಲಿ ಕೋವಿಡ್‌ನಿಂದ 290 ಮಂದಿ ಸಾವನ್ನಪ್ಪಿದ್ದು, ಸೋಂಕಿನಿಂದ ಸತ್ತವರ ಸಂಖ್ಯೆ 4,46,658ಕ್ಕೆ ಏರಿದಂತಾಗಿದೆ. ಕೋವಿಡ್‌ನಿಂದ ಗುಣಮುಖರಾಗುತ್ತಿರುವವರ ಪ್ರಮಾಣ ಶೇ 97.78ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!