News Kannada
Thursday, October 06 2022

ಪಂಜಾಬ್

ಪಂಜಾಬ್ ಮುಖ್ಯಮಂತ್ರಿ ಚರಣಜೀತ್ ಸಿಂಗ್ ಚನ್ನಿ ಅವರನ್ನು‌ ಬೇಟಿಯಾಗಲು ಒಪ್ಪಿಕೊಂಡ ನವಜೋತ್ ಸಿಂಗ್ ಸಿಧು - 1 min read

Photo Credit :

ಪಂಜಾಬ್: ಮಹತ್ವದ ಬೆಳವಣಿಗೆಯಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಪಂಜಾಬ್ ಮುಖ್ಯಮಂತ್ರಿ ಚರಣಜೀತ್ ಸಿಂಗ್ ಚನ್ನಿಯನ್ನು ಭೇಟಿ ಮಾಡಲು ನವಜೋತ್ ಸಿಂಗ್ ಸಿಧು ಒಪ್ಪಿಕೊಂಡಿದ್ದಾರೆ.

ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರ ಪತ್ನಿ ಪ್ರಣೀತ್ ಕೌರ್ ಅವರನ್ನು ಪಂಜಾಬ್ ಪಿಸಿಸಿ ಮುಖ್ಯಸ್ಥರನ್ನಾಗಿ ಕಾಂಗ್ರೆಸ್ ಆಯ್ಕೆ ಮಾಡುವ ಊಹಾಪೋಹಗಳ ನಂತರ ನಡೆದ ಬೆಳವಣಿಗೆಯಾಗಿದ್ದು, ಸಿಎಂ ಭೇಟಿ ಬಗ್ಗೆ ಸಿದ್ದು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಇನ್ನೊಂದೆಡೆ ಪಂಜಾಬ್ ನೂತನ ಸಚಿವ ಪರ್ಗತ್ ಸಿಂಗ್ ಅವರು ದೆಹಲಿ ಮುಖ್ಯಮಂತ್ರಿ ,ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಗುರುವಾರ ಕಿಡಿ ಕಾರಿದ್ದು ನಿಮ್ಮ ಸಲಹೆ ನಮಗೆ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಪಂಜಾಬ್ ಗೆ ಆಗಮಿಸಿದ್ದ ಅರವಿಂದ್ ಕೇಜ್ರಿವಾಲ್ ” ಕಳಂಕಿತರು ಮತ್ತು ಭ್ರಷ್ಟ ಅಧಿಕಾರಿಗಳನ್ನು ವಜಾ ಮಾಡಿ ಕ್ರಮ ಕೈಗೊಳ್ಳಲಿ ಎಂದು” ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಛನ್ನಿ ಬಳಿ ಆಗ್ರಹಿಸಿದ್ದರು. ಈ ಬಗ್ಗೆ ಅಸಮಧಾನ ವ್ಯಕ್ತಪಡಿಸಿ , ನಮಗೆ ಅವರ ಸಲಹೆಯ ಅಗತ್ಯವಿಲ್ಲ. ನಾವು ಪಂಜಾಬ್‌ನ ಒಳಿತನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. ನಮ್ಮ ಹೋರಾಟವು ಅನೇಕ ಸಮಸ್ಯೆಗಳ ಕುರಿತಾಗಿ ಹೊರತು ಯಾವುದೇ ವ್ಯಕ್ತಿಯನ್ನು ಆಧರಿಸಿಲ್ಲಎಂದಿದ್ದಾರೆ.

See also  ಭಾರತೀಯ ಸೇನೆಯ ಅಧಿಕಾರಿಯ ಹೊಸ ಗಿನ್ನಿಸ್ ದಾಖಲೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು