News Kannada
Wednesday, December 07 2022

ದೇಶ

ಕುಟುಂಬದವರನ್ನೇ ಒಳಗೊಂಡ ರಾಜಕೀಯ ಪಕ್ಷಗಳಿಗೆ ರೈತರ ಬಗ್ಗೆ ಕಾಳಜಿಯಿಲ್ಲ : ವಿರೋಧ ಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ತೀವ್ರ ಅಸಮಾಧಾನ

Photo Credit :

ಕುಟುಂಬದವರನ್ನೇ ಒಳಗೊಂಡ ರಾಜಕೀಯ ಪಕ್ಷಗಳಿಗೆ ರೈತರ ಬಗ್ಗೆ ಕಾಳಜಿಯಿಲ್ಲ. ಅನ್ನದಾತರ ಅಗತ್ಯಗಳನ್ನು ಪೂರೈಸುವುದು ಅವರಿಗೆ ಬೇಕಾಗಿಲ್ಲ ಎಂದು ವಿರೋಧ ಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಇಂದು ಉತ್ತರಪ್ರದೇಶ ಮಹೋಬಾದಲ್ಲಿ ಸಾರ್ವಜನಿಕ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, , ರೈತರನ್ನು ಸದಾ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿಸುವುದೇ ಹಲವು ರಾಜಕೀಯ ಪಕ್ಷಗಳ ಕೆಲಸ. ಅದರ ಮೇಲೇ ಅವರು ತಮ್ಮ ಪಕ್ಷದ ತಳಹದಿ ಹಾಕಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ನಮ್ಮ ದೇಶದಲ್ಲಿ ಒಂದಷ್ಟು ರಾಜಕೀಯ ಪಕ್ಷಗಳು ಸದಾ ಸಮಸ್ಯೆ ರಾಜಕಾರಣ ನಡೆಸುತ್ತವೆ. ಆದರೆ ಬಿಜೆಪಿ ಹಾಗಲ್ಲ. ನಮ್ಮ ಪಕ್ಷದ್ದು ಪರಿಹಾರ ರಾಜಕಾರಣ ಎಂದು ಹೇಳಿದ ಪ್ರಧಾನಿ ಮೋದಿ, ಕುಟುಂಬ ರಾಜಕಾರಣ ಮಾಡುವವರಿಗೆ ರೈತರು ತೊಂದರೆಯಲ್ಲಿ ಇರುವುದೇ ಬೇಕಾಗಿದೆ.

ರೈತರ ಹೆಸರಲ್ಲಿ ದೊಡ್ಡದೊಡ್ಡ ಘೋಷಣೆ ಕೂಗುತ್ತಾರೆ. ಆದರೆ ಅವರಿದ್ದಲ್ಲಿಗೆ ಯಾರೂ ಹೋಗುವುದಿಲ್ಲ. ನಮ್ಮ ಸರ್ಕಾರ ಪಿಎಂ ಕಿಸಾನ್​ ಸಮ್ಮಾನ್​ ನಿಧಿ ಯೋಜನೆಯ ಮೂಲಕ 1.62 ಕೋಟಿ ರೂಪಾಯಿಯನ್ನು ರೈತರ ಅಕೌಂಟ್​ಗೆ ನೇರವಾಗಿ ಹಾಕಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ನಿನ್ನೆ ಬೆಳಗ್ಗೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿಯವರು ಮೂರು ಕೃಷಿ ಕಾಯ್ದೆಗಳನ್ನು ವಾಪಸ್​ ಪಡೆಯುವುದಾಗಿ ಘೋಷಿಸಿದರು.

See also  ಅಫ್ಘಾನಿಸ್ಥಾನದಿಂದ ಭಾರತದ ರಾಜತಾಂತ್ರಿಕ ಸಿಬ್ಬಂದಿ ಸುರಕ್ಷಿತವಾಗಿ ಸ್ವದೇಶಕ್ಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು