ಲಸಿಕೆ ಹಾಕಿಸಿಕೊಳ್ಳದ ಸ್ಥಳೀಯರು ಮತ್ತು ಪ್ರವಾಸಿಗರಿಗೆ ಮಧುರೈನ 18 ಸಾರ್ವಜನಿಕ ಸ್ಥಳಗಳ ಪ್ರವೇಶಕ್ಕೆ ನಿಷೇಧ ಹೇರಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಎಸ್. ಅನೀಶ್ ಶೇಖರ್ ತಿಳಿಸಿದ್ದಾರೆ.
ಡಿಸೆಂಬರ್ 12 ರಿಂದ ಈ ನಿಯಮ ಜಾರಿಗೆ ಬರಲಿದ್ದು, ಲಸಿಕೆ ಹಾಕಿಸಿಕೊಳ್ಳದ ಡಿಸೆಂಬರ್ 12 ರಿಂದ ಮಾರುಕಟ್ಟೆ, ಹೋಟೆಲ್, ಶಾಪಿಂಗ್ ಮಾಲ್, ಚಿತ್ರ ಮಂದಿರ, ಕಲ್ಯಾಣ ಮಂಟಪ, ಟ್ಯಾಸ್ಮ್ಯಾಕ್ ಮತ್ತು ಪಿಡಿಎಸ್ ಅಂಗಡಿಗಳಿಗೆ ಹೋಗುವಂತಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ದೇಶದಲ್ಲಿ ಎರಡು ಓಮಿಕ್ರಾನ್ ಪ್ರಕರಣಗಳನ್ನು ಪತ್ತೆಯಾದ ಬೆನ್ನಲ್ಲೇ ಜಿಲ್ಲಾಧಿಕಾರಿಗಳು ಈ ನಿರ್ಧಾರ ತೆಗೆದುಕೊಂಡಿದ್ದು, “ಜಿಲ್ಲೆಯಲ್ಲಿ ಲಸಿಕೆ ನೀಡುವಲ್ಲಿ ಕಳಪೆ ಸಾಧನೆಯಾಗಿದೆ. ಜಿಲ್ಲೆಯಲ್ಲಿ ಮೊದಲ ಡೋಸ್ ಶೇ.71 ಹಾಗೂ ಎರಡನೇ ಡೋಸ್ ಶೇ.32ರಷ್ಟು ಮಂದಿ ಮಾತ್ರ ಪಡೆದಿದ್ದಾರೆ. ಸುಮಾರು 3 ಲಕ್ಷ ಜನರು ಇನ್ನೂ ಒಂದು ಡೋಸ್ ಅನ್ನು ಪಡೆಯಬೇಕಾಗಿದೆ ಎಂದು ಹೇಳಿದರು.