News Kannada
Wednesday, March 29 2023

ದೇಶ

ವಿಶ್ವದ ಅತ್ಯಂತ ಮೆಚ್ಚುಗೆ ಪಡೆದ ಪುರುಷರ ಪಟ್ಟಿ ಪ್ರಕಟ: ಪ್ರಧಾನಿ ಮೋದಿ 8ನೇ ಸ್ಥಾನ

ಪ್ರಧಾನಿ ನರೇಂದ್ರ ಮೋದಿ
Photo Credit :

ಯುಕೆ ಮೂಲದ ಮಾರ್ಕೆಟ್​ ರಿಸರ್ಚ್ ಫರ್ಮ್​ YouGov ನಡೆಸಿದ ಸಮೀಕ್ಷೆಯಲ್ಲಿ ವಿಶ್ವದ ಅತ್ಯಂತ ಮೆಚ್ಚುಗೆ ಪಡೆದ ಪುರುಷರ ಪಟ್ಟಿಯಲ್ಲಿ 8ನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಈ ಮೂಲಕ ಸಾಕಷ್ಟು ಸೆಲೆಬ್ರಿಟಿಗಳನ್ನು ಹಿಂದೆ ಹಾಕುವಲ್ಲಿ ಮೋದಿ ಯಶಸ್ವಿಯಾಗಿದ್ದಾರೆ.

ಅಂತಾರಾಷ್ಟ್ರೀಯ ಸಮೀಕ್ಷೆಯಲ್ಲಿ 8ನೇ ಸ್ಥಾನ ಪಡೆಯುವ ಮೂಲಕ ಪ್ರಧಾನಿ ಮೋದಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್​ ಪುಟಿನ್​, ಅಮೆರಿಕ ಅಧ್ಯಕ್ಷ ಜೋ ಬಿಡೆನ್​​, ಚೀನಾದ ಉದ್ಯಮಿ ಜಾಕ್​ ಮಾ, ಪೋಪ್​ ಪ್ರಾನ್ಸಿಸ್​ ಹಾಗೂ ಪಾಕ್​ ಪ್ರಧಾನಿ ಇಮ್ರಾನ್​ ಸೇರಿದಂತೆ ಅನೇಕರನ್ನು ಸರಿಗಟ್ಟಿದ್ದಾರೆ.

ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್​ ಒಬಾಮಾ ಸತತ ಎರಡನೇ ಬಾರಿಗೆ ಮೊದಲನೇ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅನೇಕ ಬಾರಿ ಈ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದ ಅಮೆರಿಕನ್​ ಉದ್ಯಮಿ ಬಿಲ್​ ಗೇಟ್ಸ್​​ರನ್ನು 2020ರಲ್ಲಿ ತೀವ್ರ ಪೈಪೋಟಿಯೊಂದಿಗೆ ಹಿಂದಿಕ್ಕಿದ್ದ ಒಬಾಮಾ ಈ ಬಾರಿ ಕೂಡ ಮೊದಲನೇ ಸ್ಥಾನವನ್ನು ಅಲಂಕರಿಸಿದ್ದಾರೆ.

ಈ ವರ್ಷದ ಪಟ್ಟಿಯಲ್ಲಿ ಉದ್ಯಮಿ ಬಿಲ್​ ಗೇಟ್ಸ್ ಎರಡನೇ ಸ್ಥಾನದಲ್ಲಿದ್ದರೆ ಚೀನಾ ಅಧ್ಯಕ್ಷ ಕ್ಸಿ ಜಿನ್​ಪಿಂಗ್​ ಮೂರನೇ ಸ್ಥಾನದಲ್ಲಿದ್ದಾರೆ. ಫುಟ್ಬಾಲ್​ ದಂತಕತೆ ಕ್ರಿಸ್ಟಿಯಾನೋ ರೊನಾಲ್ಡೋ, ಆಯಕ್ಷನ್​ ಸ್ಟಾರ್​ ಜಾಕಿ ಚಾನ್​, ರಷ್ಯಾ ಅಧ್ಯಕ್ಷ ವ್ಲಾಡಿಮಿರ್​ ಪುಟಿನ್​ ಹಾಗೂ ಚೀನಾದ ಉದ್ಯಮಿ ಜಾಕ್​ ಮಾ ಟಾಪ್​ 10 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

See also  ದೇಶದಲ್ಲಿ 15 ಲಕ್ಷ ಗಡಿದಾಟಿದ ಕೋವಿಡ್ ಸೋಂಕಿತರ ಸಂಖ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು