ಪಾಟ್ನಾ: ರಾಹುಲ್ ಗಾಂಧಿ ಮತ್ತೊಂದು ಸಂಕಷ್ಟ ಎದುರಾಗಿದ್ದು, ಪಾಟ್ನಾ ಸಂಸದ-ಶಾಸಕ ನ್ಯಾಯಾಲಯವು ಸಮನ್ಸ್ ನೀಡಿದೆ. ಮೋದಿ ಉಪನಾಮ ಹೊಂದಿರುವವರ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ಹಿರಿಯ ನಾಯಕ ಮತ್ತು ರಾಜ್ಯಸಭಾ ಸಂಸದ ಸುಶೀಲ್ ಕುಮಾರ್ ಮೋದಿ ಅವರು ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಆರೋಪ ಹೊರಿಸಿದ್ದಾರೆ.
“ಮೋದಿ ಉಪನಾಮ” ಹೇಳಿಕೆಗೆ ಸಂಬಂಧಿಸಿದಂತೆ ಏಪ್ರಿಲ್ 12ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.
ಕರ್ನಾಟಕದಲ್ಲಿ 2019 ರ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ರಾಹುಲ್ ಗಾಂಧಿ ಅವರು ಮೋದಿ ಉಪನಾಮ ಹೊಂದಿರುವವರೆಲ್ಲರೂ ಕಳ್ಳರು ಎಂದು ಹೇಳಿದರು.
ನೀರವ್ ಮೋದಿ ಮತ್ತು ಲಲಿತ್ ಮೋದಿ ಸಾವಿರಾರು ಕೋಟಿ ರೂಪಾಯಿ ಕಿತ್ತುಕೊಂಡು ದೇಶ ಬಿಟ್ಟು ಪರಾರಿಯಾಗಿದ್ದಾರೆ ಎಂದೂ ಅವರು ಹೇಳಿದ್ದರು. ಸೂರತ್ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿದ ನಂತರ ಮತ್ತೊಮ್ಮೆ ಈ ಬೆಳವಣಿಗೆ ನೀಡಿದೆ ಮೂಲಗಳ ಪ್ರಕಾರ, ರಾಹುಲ್ ಗಾಂಧಿ ಪಾಟ್ನಾ ಸಂಸದ-ಶಾಸಕ ನ್ಯಾಯಾಲಯಕ್ಕೂ ಹಾಜರಾಗಬಹುದು.