ಇಂಫಾಲ: ಮೈಟಿ ಅಥವಾ ಮೀಟೈ ನಾಗರಿಕರು ಮತ್ತು ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಮಣಿಪುರದಲ್ಲಿ ಕುಕಿ ಉಗ್ರರು ನಡೆಸುತ್ತಿರುವ ದಾಳಿ ಮುಂದುವರೆದಿರುವಂತೆಯೇ ಇತ್ತ ಸೇನೆ ಕೂಡ ದಿಟ್ಟ ಉತ್ತರ ನೀಡಿದ್ದು ಎನ್ಕೌಂಟರ್ ಕಾರ್ಯಾಚರಣೆಯಲ್ಲಿ ಕನಿಷ್ಠ33 ಮಂದಿ ಉಗ್ರರನ್ನು ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ.
ಮುಂಜಾನೆ 2 ಗಂಟೆಗೆ ಬಂಡುಕೋರರು ಇಂಫಾಲ್ ಕಣಿವೆ ಮತ್ತು ಸುತ್ತಮುತ್ತಲಿನ ಐದು ಪ್ರದೇಶಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಭಧ್ರತಾ ಪಡೆಗಳು ಪ್ರತಿದಾಳಿ ನಡೆಸಿವೆ.
ಗುಂಡಿನ ಚಕಮಕಿಗಳು ನಡೆಯುತ್ತಿದ್ದು, ಬೀದಿ ಬೀದಿಗಳಲ್ಲಿ ಶವಗಳು ಬಿದ್ದಿವೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಸ್ವತಃ ಮಣಿಪುರದ ಸಿಎಂ ಬಿರೇನ್ ಸಿಂಗ್ ಮಾಹಿತಿ ನೀಡಿದ್ದು, ಮಣಿಪುರ ರಾಜ್ಯಾದ್ಯಂತ ಭದ್ರತಾ ಪಡೆಗಳು 40 ಭಯೋತ್ಪಾದಕರನ್ನು ಹತ್ಯೆ ಮಾಡಿವೆ ಎಂದು ಎನ್. ಬಿರೇನ್ ಸಿಂಗ್ ಹೇಳಿದ್ದಾರೆ.