ಮೇಡಕ್, -ಬಿಜೆಪಿಯ ಮುಖಂಡನನ್ನು ಕಾರಿನ ಡಿಕ್ಕಿಯಲ್ಲಿ ಹಾಕಿ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಹೃದಯವಿದ್ರಾವಕ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಮೇದಕ್ ಜಿಲ್ಲೆಯ ಬಿಜೆಪಿ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ ವಿ.ಶ್ರೀನಿವಾಸ್ ಪ್ರಸಾದ್ ಕೊಲೆಯಾಗಿದ್ದಾರೆ. ರಸ್ತೆಯಿಂದ ಸ್ವಲ್ಪ ದೂರದ ನಿರ್ಜನ ಪ್ರದೇಶದಲ್ಲಿ ಸುಟ್ಟುಹೋಗಿದ್ದ ಕಾರನ್ನು ಪರಿಶೀಲಿಸಿದಾಗ ಅದರ ಡಿಕ್ಕಿಯಲ್ಲಿ ಶ್ರೀನಿವಾಸ್ ಪ್ರಸಾದ್ ಅವರ ಶವ ಪತ್ತೆಯಾಗಿದೆ.
ಅಪರಿಚಿತ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶ್ರೀನಿವಾಸ್ ಪ್ರಸಾದ್ ಅವರನ್ನು ಕೊಲೆ ಮಾಡಿ ನಂತರ ಕಾರಿನ ಡಿಕ್ಕಿಯಲ್ಲಿ ಇಡಲಾಗಿತ್ತೋ ಅಥವಾ ಜೀವಂತವಾಗಿ ಕಾರಿನ ಡಿಕ್ಕಿಯಲ್ಲಿ ಹಾಕಿ ಸುಡಲಾಗಿದೆಯೋ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಘಟನೆ ಭೀಕರತೆಯನ್ನು ಕಂಡು ಜನತೆ ಬೆಚ್ಚಿಬಿದ್ದಿದ್ದಾರೆ. ವ್ಯಾಪಕ ಟೀಕೆಗಳು ಕೇಳಿಬಂದಿವೆ. ಶವವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸಂಬಂಧಿಕರಿಗೆ ಒಪ್ಪಿಸಲಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಮೇದಕ್ ಜಿಲ್ಲಾ ಎಸ್ಪಿ ಚಂದನ್ ದೀಪ್ತಿ ತಿಳಿಸಿದ್ದಾರೆ.
ಮೇಡಕ್ ನಲ್ಲಿ ಜಿಲ್ಲಾ ಬಿಜೆಪಿ ಮುಖಂಡನ ಕೊಲೆ

Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.