ಆಂಧ್ರಪ್ರದೇಶ ಸರ್ಕಾರ, ಸರ್ಕಾರಿ ಶಿಕ್ಷಣ ಸಂಸ್ಥೆಗಳ ಹುಡುಗಿಯರಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್ಕಿನ್ ನೀಡುತ್ತಿದೆ. ಇಂದು ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ ಅವರು ಕ್ಯಾಂಪ್ ಕಚೇರಿಯಲ್ಲಿ ‘ಸ್ವೇಚ್ಛ’ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ವಿದ್ಯಾರ್ಥಿನಿಯರ ಆರೋಗ್ಯ ಮತ್ತು ನೈರ್ಮಲ್ಯವನ್ನು ಗಮನದಲ್ಲಿಟ್ಟುಕೊಂಡು ತಿಂಗಳಿಗೆ ಹತ್ತು ಸ್ಯಾನಿಟರಿ ನ್ಯಾಪ್ಕಿನ್ ನೀಡಲಾಗುತ್ತದೆ. ಈ ಯೋಜನೆ ಅನ್ವಯ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಮಧ್ಯಂತರ ಕಾಲೇಜುಗಳಲ್ಲಿ 7 ರಿಂದ 12ನೇ ತರಗತಿಯಲ್ಲಿ ಓದುತ್ತಿರುವ ಒಟ್ಟು 10 ಲಕ್ಷ ವಿದ್ಯಾರ್ಥಿನಿಯರು ಉಚಿತ ಸ್ಯಾನಿಟರಿ ನ್ಯಾಪ್ಕಿನ್ ಪಡೆಯಲಿದ್ದಾರೆ. ಪಿರಿಯಡ್ಸ್ ಸಮಯದಲ್ಲಿ ಗೈರು ಹಾಜರಿ ಮತ್ತು ನೈರ್ಮಲ್ಯ ಕಾಪಾಡಲು ಈ ಯೋಜನೆಯನ್ನು ಜಾರಿಗೆ ತರಲಾಗಿದೆ.