News Kannada
Sunday, September 25 2022

ಬಿಹಾರ

ಬಿಹಾರ: ಅಮಲು ಪದಾರ್ಥ ನೀಡಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ - 1 min read

SIT to probe gang-rape case in Bihar's Vaishali
Photo Credit : IANS

ಬೆಟ್ಟಿಯಾ(ಬಿಹಾರ): ಬಿಹಾರದ ಪಶ್ಚಿಮ ಚಂಪಾರಣ್‌ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ.

ಬಸ್ಸಿನಲ್ಲೇ ಚಾಲಕ, ಹೆಲ್ಪರ್‌ ಮತ್ತು ಕಂಡಕ್ಟರ್‌ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಬಗ್ಗೆ ಮಾಹಿತಿ ನೀಡಿರುವ ಬಾಲಕಿ, ನನ್ನನ್ನು ಪಾಟ್ನಾಗೆ ಕರೆದುಕೊಂಡು ಹೋಗುವುದಾಗಿ ಹೇಳಿ ಹೆಲ್ಪರ್‌ ಬಸ್ಸಿನಲ್ಲಿ ಕೂರಿಸಿದರು ಎಂದಿದ್ದಾಳೆ. ನಂತರ ಚಾಲಕ ಬಸ್ ಅನ್ನು ಬಸ್ ನಿಲ್ದಾಣದಿಂದ ತೆಗೆದು ಬೈಪಾಸ್ ರಸ್ತೆಗೆ ಹಾಕಿದ್ದಾನೆ. ಇದೇ ಅನುಕ್ರಮದಲ್ಲಿ ಬಾಲಕಿಗೆ ಪಾನೀಯದಲ್ಲಿ ಅಮಲು ಪದಾರ್ಥ ಬೆರೆಸಿ ಕುಡಿಸಿದ್ದಾನೆ. ಬಾಲಕಿ ಪ್ರಜ್ಞೆ ತಪ್ಪಿದ ಬಳಿಕ ಬಸ್ಸಿನಲ್ಲೇ ಅತ್ಯಾಚಾರವೆಸಗಿದ್ದಾರೆ. ಇದಾದ ಬಳಿಕ ಸಂತ್ರಸ್ತೆಯನ್ನು ಬಸ್ಸಿನಲ್ಲೇ ಬಿಟ್ಟು ಬೀಗ ಹಾಕಿ ಪರಾರಿಯಾಗಿದ್ದಾರೆ.

ಅಪ್ರಾಪ್ತ ಬಾಲಕಿಗೆ ಪ್ರಜ್ಞೆ ಬಂದಾಗ ಬಸ್‌ ಒಳಗಿನಿಂದ ಬಾಗಿಲು ಬಡಿದಿದ್ದಾಳೆ. ಈ ವೇಳೆ ದಾರಿಹೋಕರು ಬಸ್‌ನ ಬಾಗಿಲು ತೆರೆದು ಸ್ಥಳೀಯ ನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.  ಅದೇ ವೇಳೆಗೆ ಮಾಹಿತಿ ಪಡೆದ ಪೊಲೀಸರು ಅಪ್ರಾಪ್ತ ಬಾಲಕಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಅವರನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಬಾಲಕಿ ತನಗೆ ಸಾರಾಯಿ ಕುಡಿಸಿ ತನ್ನೊಂದಿಗೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆಯನ್ನು ವಿವರಿಸಿದ್ದಾಳೆ.

ಇದೀಗ ಇಬ್ಬರು ಆರೋಪಿಗಳ ಬಂಧನವಾಗಿದ್ದು, ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

See also  ಹಕ್ಕಿ ಜ್ವರದ ಭೀತಿ: ಬಿಹಾರದಲ್ಲಿ ಹೆಚ್ಚಾಗಿದೆ ಹಕ್ಕಿ ಜ್ವರದ ಕಾಟ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು