ಪಾಟ್ನಾ: ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದ ಭಾಗವಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿದ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು, ‘ಬಿಜೆಪಿ ಮುಕ್ತ ಭಾರತ’ಕ್ಕೆ ಬುಧವಾರ ಕರೆ ನೀಡಿದ್ದಾರೆ.
ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೇಶದಲ್ಲಿ ಅನೇಕ ದುಷ್ಪರಿಣಾಮಗಳಿಗೆ ಕಾರಣವಾಗಿದೆ ಎಂದು ಹೇಳಿದರು.
ಈ ವೇಳೆ “ಯಾವುದೇ ವಿರೋಧ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸದೆ” ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ “ಅಗ್ನಿಪಥ್” ಯೋಜನೆಯನ್ನು ತಂದಿದ್ದಕ್ಕಾಗಿ ಕೆಸಿಆರ್ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ನಿರುದ್ಯೋಗ, ರೂಪಾಯಿ ಮೌಲ್ಯ ಕುಸಿತ, ರೈತರ ಪ್ರತಿಭಟನೆ ಮತ್ತು ಬೆಲೆ ಏರಿಕೆ ಕುರಿತು ನಿತೀಶ್ ಕುಮಾರ್ ಹಾಗೂ ಕೆಸಿಆರ್ ಇಬ್ಬರು ನಾಯಕರು ಕೇಂದ್ರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.