News Karnataka Kannada
Friday, March 29 2024
Cricket
ಬಿಹಾರ

ಶಾಲಾ ಬಿಸಿಯೂಟದಲ್ಲಿ ಹಾವು: ಆಹಾರ ಸೇವಿಸಿದ 100 ವಿದ್ಯಾರ್ಥಿಗಳು ಅಸ್ವಸ್ಥ

Snake in school mid-day meal: 100 students fall ill after consuming food
Photo Credit : News Kannada

ಪಾಟ್ನಾ: ಅರಾರಿಯಾ ಜಿಲ್ಲೆಯ ಫೋರ್ಬೆಸ್‌ಗಂಜ್‌ನಲ್ಲಿರುವ ಸರ್ಕಾರಿ ಶಾಲೆಯಲ್ಲಿ ಶನಿವಾರ ಮಧ್ಯಾಹ್ನದ ಬಿಸಿ ಊಟದಲ್ಲಿ ಹಾವು ಕಂಡುಬಂದಿದ್ದು ಊಟ ಸೇವಿಸಿದ ಹಲವು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶಾಲೆಯ ನೂರಾರು ಮಕ್ಕಳು ಆಹಾರವನ್ನು ಸೇವಿಸಿದ ನಂತರ ಅಸ್ವಸ್ಥರಾಗಿದ್ದು ಚಿಕಿತ್ಸೆಗಾಗಿ ಫೋರ್ಬ್ಸ್‌ಗಂಜ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇ 27ರ ಮಧ್ಯಾಹ್ನದ ಊಟದ ಸಮಯದಲ್ಲಿ ಖಿಚಡಿಯನ್ನು ವಿದ್ಯಾರ್ಥಿಗಳಿಗೆ ಬಡಿಸಲಾಗಿತ್ತು. ಈ ವೇಳೆ ವಿದ್ಯಾರ್ಥಿಗೆ ಬಡಿಸಿದ್ದ ಪ್ಲೇಟ್‌ವೊಂದರಲ್ಲಿ ಹಾವು ಕಂಡುಬಂದಿದೆ ಎಂದು ಪ್ರಾಥಮಿಕ ವರದಿಗಳು ಸೂಚಿಸುತ್ತವೆ.

ಘಟನೆ ವರದಿಯಾದ ನಂತರ ಶಾಲೆಯಲ್ಲಿ ಊಟದ ವಿತರಣೆಯನ್ನು ನಿಲ್ಲಿಸಲಾಯಿತು. ಆದರೆ ಅದಾಗಲೇ ಆಹಾರ ಸೇವಿಸಿದ್ದ ವಿದ್ಯಾರ್ಥಿಗಳಿಗೆ ವಾಂತಿಭೇದಿ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಫೋರ್ಬ್ಸ್‌ಗಂಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನೂರು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು