News Kannada
Saturday, February 24 2024
ಬಿಹಾರ

ಬಿಹಾರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಸಾವು

ಬಿಹಾರದ ಕತಿಹಾರ್​ನಲ್ಲಿ ಬಸ್​ವೊಂದು ಪಲ್ಟಿಯಾಗಿದ್ದು ಇಬ್ಬರು ಮಹಿಳಾ ಪ್ರಯಾಣಿಕರು ಮೃತಪಟ್ಟು, ಅನೇಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
Photo Credit : IANS

ಪಾಟ್ನಾ: ವೇಗವಾಗಿ ಚಲಿಸುತ್ತಿದ್ದ ಎಸ್ ಯುವಿಯೊಂದು ಪಲ್ಟಿಯಾಗಿ ಹಳ್ಳಕ್ಕೆ ಬಿದ್ದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬಿಹಾರದ ಗಯಾ ಮತ್ತು ನಳಂದ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ಸೋಮವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರಲ್ಲಿ 40 ವರ್ಷದ ಮಹಿಳೆ, 30 ವರ್ಷದ ಪುರುಷ ಮತ್ತು 10 ವರ್ಷದ ಬಾಲಕಿ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಸ್ ಯುವಿ ಚಾಲಕ ಸೇರಿದಂತೆ ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಗಯಾ ಜಿಲ್ಲೆಯ ಮೆಹ್ಕರ್ ಬ್ಲಾಕ್ ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ನಳಂದದ ಏಕಂಗರ್ಸರಾಯ್ ಬ್ಲಾಕ್ ನಿವಾಸಿಗಳಾಗಿದ್ದು, ರಾಜ್ಗಿರ್ ನ  ಮಾಲ್ಮಾಸ್ ಜಾತ್ರೆಗೆ ಪವಿತ್ರ ಸ್ನಾನ ಮಾಡಲು ತೆರಳುತ್ತಿದ್ದರು.

ಬೆಳಿಗ್ಗೆ 6 ಗಂಟೆ ಸುಮಾರಿಗೆ ಸಿಗ್ರಾ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು