News Kannada
Monday, October 03 2022

ಛತ್ತೀಸಗಢ

ತೆಲಂಗಾಣ  ಮತ್ತು ಛತ್ತೀಸ್‌ಗಢದ ಗಡಿಯಲ್ಲಿ ನಡೆದ ಎನ್‌ಕೌಂಟರ್‌ಗೆ 6 ನಕ್ಸಲರು ಬಲಿ - 1 min read

Photo Credit :

ಛತ್ತೀಸ್‌ಗಡ(ಡಿ.27) : ತೆಲಂಗಾಣ  ಮತ್ತು ಛತ್ತೀಸ್‌ಗಢದ ಗಡಿ ಪ್ರದೇಶದ ಕಿಸ್ತಾರಾಮ್  ಪೊಲೀಸ್‌ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಆರು ನಕ್ಸಲರು ಹತರಾಗಿದ್ದಾರೆ. ತೆಲಂಗಾಣ ಪೊಲೀಸರು, ಛತ್ತೀಸ್‌ಗಢ ಪೊಲೀಸರು ಮತ್ತು ಸಿಆರ್‌ಪಿಎಫ್‌ನ ಜಂಟಿ ಕಾರ್ಯಾಚರಣೆ ಇದಾಗಿದೆ ಎಂದು ತೆಲಂಗಾಣದ ಭದ್ರಾದ್ರಿ ಕೊಥಗುಡೆಂ  ಜಿಲ್ಲೆಯ ಎಸ್‌ಪಿ ಸುನಿಲ್ ದತ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಬೆಳಗ್ಗಿನ ಜಾವ ಸುಮಾರು 10.30 ರವರೆಗೂ, ನಕ್ಸಲ್ ವಿರೋಧಿ ಕಾರ್ಯಾಚರಣೆ ಮುಂದುವರೆದಿದೆ ಮತ್ತು ಪೊಲೀಸ್ ತಂಡಗಳು ಘಟನೆ ನಡೆದ ಪ್ರದೇಶದಲ್ಲಿ ಸದ್ಯದ ಬೆಳವಣಿಗೆಯ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿವೆ. ತೆಲಂಗಾಣ ಗ್ರೇ ಹೌಂಡ್ಸ್ ಮತ್ತು ನಕ್ಸಲರ ನಡುವೆ ಈ ಗುಂಡಿನ ಚಕಮಕಿ ನಡೆದಿದೆ. ಛತ್ತೀಸ್‌ಗಢದ ನಾರಾಯಣಪುರ  ಜಿಲ್ಲೆಯಲ್ಲಿ ಎರಡು ಸುಧಾರಿತ ಸ್ಫೋಟಕ ಸಾಧನಗಳನ್ನು (ಐಇಡಿ) ಪೊಲೀಸರು ವಶಪಡಿಸಿಕೊಂಡ ಕೆಲವೇ ಗಂಟೆಗಳಲ್ಲಿ ಈ ಬೆಳವಣಿಗೆ ನಡೆದಿದೆ.

ಜಿಲ್ಲೆಯಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿರುವ ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿ ಈ ಐಇಡಿಗಳನ್ನು ಹೂತಿಡಲಾಗಿತ್ತು. ಸುದ್ದಿ ಸಂಸ್ಥೆ ವರದಿಯ ಪ್ರಕಾರ, ನಕ್ಸಲರು ಅಬುಜ್ಮದ್ ಮತ್ತು ಬಸ್ತಾರ್ ಪ್ರದೇಶಗಳಲ್ಲಿ ಸ್ಥಳೀಯರ ಬೆಂಬಲವನ್ನು ಕಳೆದುಕೊಳ್ಳುತ್ತಿರುವುದರಿಂದ ಧೃತಿಗೆಟ್ಟ ನಕ್ಸಲರು ಜಿಲ್ಲೆಯ ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಈ ಐಇಡಿಗಳನ್ನು ಹೂತಿಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಕೆಲವು ತಿಂಗಳುಗಳಿಂದ, ಜಿಲ್ಲೆಯ ನಕ್ಸಲ್‌ ಪೀಡಿತ ಪ್ರದೇಶಗಳಲ್ಲಿ ಶೋಧವನ್ನು ತೀವ್ರಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಕಾರ್ಯಾಚರಣೆಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

 

See also  ಛತ್ತೀಸ್‌ʼಗಡದಲ್ಲಿ ಪೊಲೀಸರಿಗೆ ಶರಣಾದ 44 ನಕ್ಸಲರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು