News Karnataka Kannada
Wednesday, May 08 2024
ದೆಹಲಿ

ಇಂದು ಪಂಚರಾಜ್ಯ ಚುನಾವಣೆ ಮತ ಎಣಿಕೆ

Election Commission
Photo Credit :

ನವದೆಹಲಿ: ಭಾರತದಲ್ಲಿ ನಡೆದ ಐದು ರಾಜ್ಯಗಳ ಏಳು ಹಂತಗಳಲ್ಲಿ ನಡೆದ ವಿಧಾನಸಭೆ ಚುನಾವಣೆಗಳು ಕದನ ಕೌತುಕವನ್ನು ಕೆರಳಿಸಿದೆ. ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್ ಮತ್ತು ಮಣಿಪುರದಲ್ಲಿ ಯಾವ ಪಕ್ಷಕ್ಕೆ ಗದ್ದುಗೆ ದಕ್ಕಲಿದೆ ಎನ್ನುವ ಪ್ರಶ್ನೆಗೆ ಇನ್ನೇನು ಉತ್ತರ ಸಿಗಲಿದೆ.

ಪಂಚ ರಾಜ್ಯಗಳ ಪೈಕಿ ಉತ್ತರ ಪ್ರದೇಶವು ಅತಿಹೆಚ್ಚು ವಿಧಾನಸಭೆ ಕ್ಷೇತ್ರಗಳನ್ನು ಹೊಂದಿದೆ. 403 ವಿಧಾನಸಭೆ ಕ್ಷೇತ್ರಗಳಿಗೆ ಏಳು ಹಂತಗಳಲ್ಲಿ ಮತದಾನ ಪ್ರಕ್ರಿಯೆ ನಡೆಸಲಾಗಿದ್ದು, ಸರ್ಕಾರ ರಚಿಸುವುದಕ್ಕೆ ಮ್ಯಾಜಿಕ್ ನಂಬರ್ 202 ಆಗಿದೆ. ಅದರಂತೆ ಪಂಜಾಬಿನ 117 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆದಿದ್ದು, ಬಹುಮತಕ್ಕೆ 59 ಸ್ಥಾನಗಳನ್ನು ಗೆದ್ದುಕೊಳ್ಳಬೇಕಿದೆ.

ಉತ್ತರಾಖಂಡದ 70 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ಪೂರ್ಣಗೊಂಡಿದ್ದು, ಅಂತಿಮ ಫಲಿತಾಂಶಕ್ಕಾಗಿ ಎದುರು ನೋಡಲಾಗುತ್ತಿದೆ. ಇಲ್ಲಿ ಸರ್ಕಾರ ರಚನೆಗೆ 36 ಸ್ಥಾನಗಳನ್ನು ಗಳಿಸಬೇಕಿದೆ. ಗೋವಾದಲ್ಲಿ 40 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಸರ್ಕಾರ ರಚಿಸುವುದಕ್ಕೆ 21 ಸ್ಥಾನಗಳು ಅಗತ್ಯವಾಗಿದೆ. ಉಳಿದಂತೆ ಮಣಿಪುರದ 60 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ಪೂರ್ಣಗೊಂಡಿದ್ದು, ಯಾವುದೇ ಪಕ್ಷ ಸರ್ಕಾರ ರಚಿಸಬೇಕಾದರೆ 31 ಸ್ಥಾನಗಳನ್ನು ಗೆದ್ದುಕೊಳ್ಳಬೇಕಾಗಿದೆ.

ಪಂಚರಾಜ್ಯಗಳ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮತದಾರ ಪ್ರಭುಗಳು ನೀಡಿರುವ ತೀರ್ಪು ಮತಯಂತ್ರಗಳಲ್ಲಿ ಭದ್ರವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು