News Karnataka Kannada
Friday, April 19 2024
Cricket
ದೆಹಲಿ

ಕೋವಿಡ್-19: ಭಾರತದಲ್ಲಿಂದು 20,799 ಹೊಸ ಕೇಸ್ ಪತ್ತೆ, 180 ಮಂದಿ ಸಾವು

Corana
Photo Credit :

ನವದೆಹಲಿ: ಕೊರೋನಾ 3ನೇ ಅಲೆ ಭೀತಿ ನಡುವೆಯೇ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 20,799 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 180 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಸೋಮವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,38,34,702ಕ್ಕೆ ತಲುಪಿದ್ದು, 4,48,997ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,64,458ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 26,718 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,31,21,247ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 9,91,676 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 57,42,52,400 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು