ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 16,051 ಜನರಲ್ಲಿ ಸೋಂಕು ಪತ್ತೆಯಾಗಿದೆ.ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 206 ಜನ ಬಲಿಯಾಗಿದ್ದಾರೆ.
ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,12,109 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 2,02,131 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 37,901 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,21,24,284 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 7,00,706 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,75,46,25,710 ಡೋಸ್ ಲಸಿಕೆ ಹಾಕಲಾಗಿದೆ.