NewsKarnataka
Sunday, September 26 2021

ದೆಹಲಿ

ಅಂತಾರಾಷ್ಟ್ರೀಯ ಹುಲಿ ದಿನ: ವನ್ಯಜೀವಿ ಪ್ರೇಮಿಗಳಿಗೆ ಪ್ರಧಾನಿ ಶುಭಾಶಯ

ನವದೆಹಲಿ: ಅಂತಾರಾಷ್ಟ್ರೀಯ ಹುಲಿ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವನ್ಯಜೀವಿ ಪ್ರೇಮಿಗಳಿಗೆ ಟ್ವೀಟ್ ಮಾಡಿ ಶುಭ ಕೋರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ. ‘ಪ್ರೇಮಿಗಳಿಗೆ, ವಿಶೇಷವಾಗಿ ಹುಲಿ ಸಂರಕ್ಷಣೆಯ ಬಗ್ಗೆ ಆಸಕ್ತಿ ಹೊಂದಿರುವವರಿಗೆ ಶುಭಾಶಯಗಳು. ಜಾಗತಿಕವಾಗಿ ಶೇ.70ಕ್ಕೂ ಹೆಚ್ಚು ಹುಲಿಗಳಿಗೆ ಭಾರತವೇ ನೆಲೆಯಾಗಿದ್ದು,  ನಮ್ಮ ಹುಲಿಗಳಿಗೆ ಸುರಕ್ಷಿತ ಆವಾಸಸ್ಥಾನಗಳನ್ನು ಖಾತರಿಪಡಿಸುವ ಮತ್ತು ಹುಲಿ ಸ್ನೇಹಿ ಪರಿಸರ ವ್ಯವಸ್ಥೆಗಳನ್ನು ಪೋಷಿಸುವ ನಮ್ಮ ಬದ್ಧತೆಯನ್ನು ನಾವು ಪುನರುಚ್ಚರಿಸುತ್ತೇವೆ.’ ಎಂದು ಬರೆದುಕೊಂಡಿದ್ದಾರೆ.

‘ಭಾರತದಲ್ಲಿ ಕಳೆದ 2018ರ ಹುಲಿ ಗಣತಿಯಲ್ಲಿ ಹುಲಿಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ. ʻಹುಲಿ ಸಂರಕ್ಷಣೆ ಕುರಿತಾದ ಸೇಂಟ್ ಪೀಟರ್ಸ್‌ಬರ್ಗ್ ಘೋಷಣೆʼಯ ನಿಗದಿತ ಸಮಯಕ್ಕಿಂತಲೂ 4 ವರ್ಷ ಮುಂಚಿತವಾಗಿ ಹುಲಿಗಳ ಜನಸಂಖ್ಯೆಯನ್ನು ದ್ವಿಗುಣಗೊಳಿಸುವ ಗುರಿಯನ್ನು ಭಾರತ ಸಾಧಿಸಿದೆ.ʼ‘ಹುಲಿ ಸಂರಕ್ಷಣೆ ಕುರಿತಾದ ಭಾರತದ ಕಾರ್ಯತಂತ್ರದಲ್ಲಿ ಸ್ಥಳೀಯ ಸಮುದಾಯಗಳ ಪಾಲ್ಗೊಳ್ಳುವಿಕೆಗೆ ಅತಿ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಭೂಮಿಯ ಮೇಲಿರುವ ಪ್ರಾಣಿ ಮತ್ತು ಸಸ್ಯ ಸಂಪತ್ತಿನ ಜತೆ ಸಹಬಾಳ್ವೆ ನಡೆಸುವ ನಮ್ಮ ಶತಮಾನಗಳ ಹಳೆಯ ತತ್ವದಿಂದ ನಾವು ಪ್ರೇರಿತರಾಗಿದ್ದೇವೆ.’ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!